More

    ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ; ಕರ್ತವ್ಯ ಗೈರಾದರೆ ಶಿಸ್ತು ಕ್ರಮಕ್ಕೆ ಶಿಫಾರಸು

    ಧಾರವಾಡ: ಲೋಕಸಭೆ ಚುನಾವಾಣೆಗೆ ಜಿಲ್ಲಾಡಳಿತ ಸಿದ್ಧತೆ ಮಾಡುತ್ತಿದೆ. ಚುನಾವಣಾ ಕರ್ತವ್ಯ ನಿರ್ವಹಣೆಗೆ ನೋಡಲ್ ಅಽಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಽಕಾರಿ, ಸಿಬ್ಬಂದಿ ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಜೆ ಅಥವಾ ಗೈರುಹಾಜರಾಗಬಾರದು. ಅನುಮತಿ ಪಡೆಯದೆ ಗೈರಾಗುವುದನ್ನು ಗಂಭೀರವಾಗಿ ಪರಿಗಣಿಸಿ, ಅಂಥವರನ್ನು ಜಿಲ್ಲೆಯಿಂದ ಬಿಡುಗಡೆ ಮಾಡಿ ಭಾರತ ಚುನಾವಣಾ ಆಯೋಗಕ್ಕೆ ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಽಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ ನೀಡಿದರು.
    ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
    ನೋಡಲ್ ಅಽಕಾರಿಗಳಿಗೆ ಅವರ ಅಽÃನದಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸದಸ್ಯರನ್ನಾಗಿ ನೇಮಿಸಿದೆ. ಪ್ರತಿ ನೊಡಲ್ ಅಧಿಕಾರಿ ತನ್ನ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ತಂಡಗಳ ಮಧ್ಯೆ ಪರಸ್ಪರ ಸಮನ್ವಯ, ಸಂವಹನ ಇರಬೇಕು. ಸಹಾಯವಾಣಿ, ಕಂಟ್ರೋಲ್ ರೂಂ ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಸಿಬ್ಬಂದಿ ಪೂರ್ವಾನುಮತಿ ಪಡೆಯದೆ ರಜೆ ಹೋಗುವುದಾಗಲಿ ಅಥವಾ ಗೈರುಹಾಜರಾಗದಂತೆ ನಿಗಾ ವಹಿಸಬೇಕು ಎಂದರು.
    ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಜಿಲ್ಲಾ ಪೊಲೀಸ್ ಅಽÃಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರಾಜೀವ ಎಂ., ನೋಡಲ್ ಅಽಕಾರಿಗಳು, ಚುನಾವಣಾ ತಹಸೀಲ್ದಾರರು, ಶಿರಸ್ತೇದಾರರು, ವಿಷಯ ನಿರ್ವಾಹಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts