More

    ನಾಳೆಯಿಂದ ಭಗವತಿ ದೇವಾಲಯದ ಮರು ಪ್ರತಿಷ್ಠಾಪನೆ


    ನಾಪೋಕ್ಲು: ಹೊದ್ದೂರು ಗ್ರಾಮದ ಶ್ರೀ ಭಗವತಿ ದೇವಾಲಯದ ಮರು ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಳಶೋತ್ಸವ ಮಾ.7ರಿಂದ 14ರವರೆಗೆ ಜರುಗಲಿದೆ ಎಂದು ದೇವಾಲಯದ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚೌರೀರ. ಕೆ.ಮೇದಪ್ಪ ಹೇಳಿದರು.

    13ರಂದು ಬೆಳಗ್ಗೆ 8ರಿಂದ 10 ಗಂಟೆ ಒಳಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ , ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ದೇವಾಲಯದ ತಕ್ಕ ಮುಖ್ಯಸ್ಥ, ಕಾರ್ಯದರ್ಶಿಯೂ ಆಗಿರುವ ನೆರವಂಡ ಸಂಜಯ್ ಪೂಣಚ್ಚ ಮಾತನಾಡಿ, ಗ್ರಾಮದ ಪುರಾತನ ದೇವಾಲಯವಿದು. 2013ರಲ್ಲಿ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಲಾಯಿತು. 2018ರಲ್ಲಿ ಸ್ವರ್ಣ ಪ್ರಶ್ನೆ ಇಡಲಾಯಿತು. 1.50 ಕೋಟಿ ರೂ. ವೆಚ್ಚದಲ್ಲಿ ಸುಂದರ ದೇವಾಲಯ ನಿರ್ಮಾಣಗೊಂಡಿದೆ. ಇನ್ನೂ ಸುಮಾರು 30 ಲಕ್ಷ ರೂ. ಅಗತ್ಯವಿದೆ ಎಂದರು.

    ಜೀರ್ಣೋದ್ಧಾರ ಸಮಿತಿ ಸದಸ್ಯ ಚೌರೀರ ಉದಯ ಮಾತನಾಡಿ, ಮಾ.7ರಂದು ಕುತ್ತಿ ಪೂಜೆ ನಡೆಯಲಿದೆ. 8ರಂದು ವಾಸ್ತು ಕಳಶ ಪೂಜೆ, ವಾಸ್ತು ಬಲಿ ನೆರವೇರಲಿದೆ. 9ರಂದು ಸಂಜೆ 5 ಗಂಟೆಯಿಂದ ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾರಾಧನೆ ನಡೆಯಲಿದೆ. 10ರಂದು ಸಂಜೆ 6 ಗಂಟೆಯಿಂದ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಲಿದೆ. 11ರಂದು ಬೆಳಗ್ಗೆ ಗಣಪತಿ ಹೋಮ, ಸಂಜೆ ಅನುಜ್ಞಾ ಬಲಿ ಹಾಗೂ ಅನುಜ್ಞಾ ಪ್ರಾರ್ಥನೆ ಗ್ರಾಮಸ್ಥರಿಂದ ನೆರವೇರಲಿದೆ. 12ರಂದು ಸಂಜೆ 4 ಗಂಟೆಗೆ ಜಲೋದ್ಧಾರ ಬಿಂಬಶುದ್ಧಿ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ಜರುಗಲಿವೆ. 13ರಂದು ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ , ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ. 14ರಂದು ಮಧ್ಯಾಹ್ನ 3 ಗಂಟೆಗೆ ದೇವರ ನೃತ್ಯಬಲಿ ಜರುಗಲಿದೆ ಎಂದು ವಿವರಿಸಿದರು.

    ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾಪನೆ ಬ್ರಹ್ಮ ಕಳಶ ಮತ್ತು ವೈದಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ಹಾಗೂ ದೇವಸ್ಥಾನದ ತಕ್ಕ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಜರುಗಲಿವೆ. ಪ್ರತಿ ದಿನ ವೈದಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ದೇವಾಲಯದ ಜೀರ್ಣೋದ್ಧಾರ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದರು. ಸಮಿತಿ ಸದಸ್ಯರಾದ ನೆರವಂಡ ಚರ್ಮಣ, ಮಂಡೆಪಂಡ ರಮೇಶ್, ಮುಂಡೋಟಿರ ಸೋಮಯ್ಯ, ವಾಂಚೀರ ಅಜಯ್, ಎ.ಪಿ.ಪೂಣಚ್ಚ ಉಪಸ್ಥಿತರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts