More

    ಬಾಗಲಕೋಟೆ ಜಿಪಂ ವ್ಯಾಪ್ತಿಯಲ್ಲಿ ವಿವಿಧ 54 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

    ಬಾಗಲಕೋಟೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 9 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ಡಿ.23ರೊಳಗೆ ಅರ್ಜಿ ಸಲ್ಲಿಸಬೇಕಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಹುದ್ದೆಗಳ ವಿವರ
    ಕರವಸೂಲಿಗಾರ (ಬಿಲ್​ ಕಲೆಕ್ಟರ್​): 10
    ಕ್ಲರ್ಕ್​ ಕಂ ಡಾಟಾ ಎಂಟ್ರಿ ಆಪರೇಟರ್​: 12
    ಅಟೆಂಡರ್​ (ಜವಾನ): 32

    ವಿದ್ಯಾರ್ಹತೆ
    ಕರವಸೂಲಿಗಾರ ಹಾಗೂ ಕ್ಲರ್ಕ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ ಅಥವಾ ತತ್ಸಮಾನ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್​ ತರಬೇತಿ ಕೋರ್ಸ್​ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ 3 ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

    ಅಟೆಂಡರ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವೃತ್ತಿಪರ ಕೋರ್ಸ್​, ಜೆಒಸಿ, ಡಿಪ್ಲೊಮಾ ಇನ್ನಿತರ ಯಾವುದೇ ವಿದ್ಯಾರ್ಹತೆ ಹಾಗೂ ಇತರ ತತ್ಸಮಾನ ವಿದ್ಯಾರ್ಹತೆ ಪರಿಗಣಿಸಲಾಗುವುದಿಲ್ಲ. ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಅಥವಾ ಮೆರಿಟ್​ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

    ವಯೋಮಿತಿ ಮತ್ತು ವೇತನ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೇ ದಿನಾಂಕದಂದು ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ಕಾರ್ಮಿಕ ಇಲಾಖೆಯಿಂದ ಕನಿಷ್ಠ ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 500 ರೂ., ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ., ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂ., ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಶುಲ್ಕ ಪಾವತಿಸಿದ ಬಗ್ಗೆ ಚಲನ್​ ಪ್ರಿಂಟ್​ ತೆಗೆದುಕೊಂಡು, ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವಾಗ ಅಪ್​ಲೋಡ್​ ಮಾಡಬೇಕು.

    ಅರ್ಜಿ ಸಲ್ಲಿಸಬೇಕಾದ ವಿಧಾನ: ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್​ಲೈನ್​ ಮೂಲಕ ಮಾತ್ರವೇ ಅವಕಾಶ ಕಲ್ಪಿಸಲಾಗಿದ್ದು, ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿಯನ್ನು https://bagalkot.nic.in ನಲ್ಲಿ ಆನ್​ಲೈನ್​ ಮೂಲಕ ಸಲ್ಲಿಸಬೇಕು. ಹುದ್ದೆಗಳಿಗೆ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸುವುದಿಲ್ಲ. ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಪ್ರತಿಯನ್ನು ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ. ಅಪೂರ್ಣ ದಾಖಲೆಗಳನ್ನು ತಿರಸ್ಕರಿಸಲಾಗುವುದು.

    ಅಧಿಸೂಚನೆಗೆ: http://bit.ly/3gitQRq
    ಮಾಹಿತಿಗಾಗಿ: https://bagalkot.nic.in
    ಅರ್ಜಿ ಸಲ್ಲಿಸಲು ಕೊನೇ ದಿನ: 23.12.2022

    2023ನೇ ಸಾಲಿನ ‘ಸಾರ್ವತ್ರಿಕ ರಜೆ- ಪರಿಮಿತ ರಜೆ’ಗಳ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts