ಕರಾವಳಿ, ಮಲೆನಾಡ ಜನರೇ ಎಚ್ಚರ! ಜುಲೈ 17ರಂದು ಸುರಿಯಲಿದೆ ಜಡಿ ಮಳೆ

rain
Published on

ಬೆಂಗಳೂರು: ಮುಂಗಾರು ಚುರುಕಾದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜು.15, 16ರಂದು ಆರೆಂಜ್ ಅಲರ್ಟ್ ಇದ್ದರೆ, 17ರಂದು ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ 15ರಂದು ಯೆಲ್ಲೋ ಅಲರ್ಟ್ ಇದ್ದರೆ, 16ರಿಂದ 18ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಗದಗ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 5 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net