ಉಡುಪಿಯಲ್ಲಿ ರೆಡ್ ಅಲರ್ಟ್

Latest News

ಚೆನ್ನೈ ರೈಲು ನಿಲ್ದಾಣವೊಂದರಲ್ಲಿ ಸೆಲೆಬ್ರಿಟಿ ನಾಯಿ: ಪ್ರಯಾಣಿಕರನ್ನು ಎಚ್ಚರಿಸುವ ಶ್ವಾನದ ಕತೆ ಬಲು ರೋಚಕ!

ಚೆನ್ನೈ: ಮಾಲೀಕನಿಂದ ಪರಿತ್ಯಕ್ತಗೊಂಡಿರುವ ನಾಯಿಯೊಂದು ಚೆನ್ನೈನ ಪಾರ್ಕ್​ ಟೌನ್​ ರೈಲ್ವೆ ನಿಲ್ದಾಣದ ದಿನ ನಿತ್ಯದ ಪ್ರಯಾಣಿಕರ ನಡುವೆ ಮಿನಿ ಸೆಲೆಬ್ರಿಟಿಯಾಗಿ ಮಿಂಚುತ್ತಿದೆ. ರೈಲು ಹಳಿಗಳನ್ನು...

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಆ.7ರಿಂದ ಆ.9ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದೆ. ಸಮುದ್ರ ಹಾಗೂ ನದಿಗಳಿಗೆ ಮೀನುಗಾರಿಕೆಗೆ ಹಡಗು ಮತ್ತು ದೋಣಿಗಳು ತೆರಳದಂತೆ, ಸಾರ್ವಜನಿಕರು ಮತ್ತು ಪ್ರವಾಸಿಗರು ಹೋಗದಂತೆ ಎಚ್ಚರ ವಹಿಸುವುದು ಹಾಗೂ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ಮೊಬೈಲ್, ದೂರವಾಣಿ, ವಾಹನ ಅಗತ್ಯ ಪರಿಕ್ರಮ ಸನ್ನದ್ಧರಾಗಿರಿಸಿ ತಕ್ಷಣ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.

ಕಾರ್ಕಳ, ಕುಂದಾಪುರ, ಬೈಂದೂರು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನೆರೆಯಿಂದಾಗಿ ಜನರು ಸಮಸ್ಯೆ ಎದುರಿಸಿದರು. ಹಲವು ಮನೆಗಳಿಗೆ ಹಾನಿಯಾಗಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಗದ್ದೆ, ತೋಟಕ್ಕೂ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಕೆಲವು ಖಾಸಗಿ, ಶಾಲೆ ಕಾಲೇಜುಗಳು ಮಧ್ಯಾಹ್ನ ಬಳಿಕ ರಜೆ ನೀಡಿ, ಪೋಷಕರೊಂದಿಗೆ ಮಕ್ಕಳನ್ನು ಮನೆಗೆ ಕಳಿಸುವ ವ್ಯವಸ್ಥೆ ಮಾಡಿವೆ.

ಹೆದ್ದಾರಿಯಲ್ಲಿ ತಗ್ಗಿದ ನೆರೆ: ಸೋಮವಾರ ರಾತ್ರಿ, ಮಂಗಳವಾರ ಸುರಿದ ಮಳೆಯಿಂದ ಹೆಬ್ರಿ ಸಮೀಪ ಬಂಡಿಮಠ ಎಂಬಲ್ಲಿ ಸೀತಾನದಿ ಉಕ್ಕಿ ಹರಿದು ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಹೆದ್ದಾರಿ ಉಡುಪಿ-ಶಿವಮೊಗ್ಗ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಸಂಪರ್ಕ ಕಡಿತಗೊಂಡಿತ್ತು. ಮಧ್ಯಾಹ್ನ ಬಳಿಕ ಮಳೆ ಪ್ರಮಾಣ ಕಡಿಮೆಯಾಗಿ ನೆರೆ ಇಳಿಮುಖವಾಗಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಪೊಲೀಸರು ಸ್ಥಳದಲ್ಲಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸಲಹೆ, ಸೂಚನೆ ನೀಡುತಿದ್ದರು.

ಆಗುಂಬೆ ರಸ್ತೆಗೆ ಬಿದ್ದ ಮರ: ಆಗುಂಬೆ ಘಾಟಿ (169ಎ, ರಾ.ಹೆ) ಮೂರನೇ ತಿರುವು ಆನೆಬಂಡೆ ಬಳಿ ರಸ್ತೆಗೆ ಬೃಹತ್ ಮರ ಬಿದ್ದಿದೆ. ಪರಿಣಾಮ ವಾಹನ ಸವಾರರು ಒಂದು ಗಂಟೆಗೂ ಹೆಚು ಕಾಲ ಪರದಾಡಿದರು. ಹೆಬ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸಾರ್ವಜನಿಕರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅರಣ್ಯ ಇಲಾಖೆ ಅಸಹಕಾರದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮೆಸ್ಕಾಂಗೆ 22 ಲಕ್ಷ ರೂ. ಹಾನಿ: ಜಿಲ್ಲೆಯ ಉಡುಪಿ, ಕಾರ್ಕಳದಲ್ಲಿ ವ್ಯಾಪಕ ಮಳೆ, ಗಾಳಿ ಪರಿಣಾಮ ಒಂದೇ ದಿನದಲ್ಲಿ 149 ಕಂಬಗಳು ನೆಲಕ್ಕುರುಳಿ, 1.2 ಕಿ.ಮೀ ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ. ಮಣಿಪಾಲ, ಪರ್ಕಳ, ಅಜ್ಜರಕಾಡು, ಮಿಶನ್ ಕಾಂಪೌಂಡ್, ಕುಂಜಿಬೆಟ್ಟು, ಕಾರ್ಕಳ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಕ್ಕೆ ಹಾನಿಯಾಗಿವೆ. ಆಗಸ್ಟ್ 1ರಿಂದ ಇಲ್ಲಿವರೆಗೆ 11 ವಿದ್ಯುತ್ ಪರಿವರ್ತಕಗಳು ಕೆಟ್ಟಿವೆ. ಒಟ್ಟು 286 ವಿದ್ಯುತ್ ಕಂಬ ಧರೆಗುರುಳಿವೆ. 6.68 ಕಿ.ಮೀ. ವಿದ್ಯುತ್ ಲೈನ್ ಹಾನಿಗೊಂಡಿದ್ದು, ಒಟ್ಟು 22 ಲಕ್ಷ ರೂ. ಹಾನಿಯಾಗಿದೆ. ಹಾನಿಗೊಂಡ ವಿದ್ಯುತ್ ಕಂಬಗಳು, ವಿದ್ಯುತ್‌ಲೈನ್ ದುರಸ್ತಿ ಕಾರ್ಯ ಭರದಿಂದ ಸಾಗುತ್ತಿದೆ, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಅಧೀಕ್ಷಕ ನರಸಿಂಹ ಪಂಡಿತ್ ವಿಜಯವಾಣಿ ಮೂಲಕ ಮನವಿ ಮಾಡಿದ್ದಾರೆ.

ಮನೆಗಳಿಗೆ ಹಾನಿ: ನಗರದ ಬೀಡಿನಗುಡ್ಡೆ, ಅಜ್ಜರಕಾಡು, ಬ್ರಹ್ಮಗಿರಿಯ 10ಕ್ಕೂ ಅಧಿಕ ಮನೆಗಳ ಮೇಲೆ ಮರ ಬಿದ್ದಿದೆ. ಇಂದ್ರಾಳಿ ದೇವಸ್ಥಾನಕ್ಕೆ ಹಾನಿಯಾಗಿದೆ. ಅಂಜಾರು, ಕೋಡಿಬೆಟ್ಟು, ಹೆರ್ಗ, 80 ಬಡಗಬೆಟ್ಟು, ಪೆರ್ಡೂರು ಭಾಗದಲ್ಲಿ 20 ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ ಎಂದು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ವಿಜಯವಾಣಿಗೆ ತಿಳಿಸಿದ್ದಾರೆ. ಮಿಶನ್ ಕಾಂಪೌಂಡ್‌ನಲ್ಲಿ ಆಟೋ ರಿಕ್ಷಾದ ಮೇಲೆ ವಿದ್ಯುತ್ ಕಂಬ ಉರುಳಿಬಿದ್ದಿದೆ. ನಗರದ ಸಿಟಿ ಆಸ್ಪತ್ರೆ ಬಳಿ ಬೃಹತ್ ಮರ ನೆಲಕ್ಕುರುಳಿದೆ.

ದುರ್ಗಾಪರಮೇಶ್ವರಿ ಪಾದ ಸ್ಪರ್ಶಿಸಿದ ಕುಬ್ಜಾ
ಕುಂದಾಪುರ: ಎರಡು ದಿನಗಳಿಂದ ಹೆಚ್ಚಿನ ಮಳೆ ಆಗುತ್ತಿರುವುದರಿಂದ ಕುಂದಾಪುರ ವ್ಯಾಪ್ತಿಯಲ್ಲಿ ಕುಬ್ಜಾ, ಚಕ್ರಾ, ಸೌಪರ್ಣಿಕಾ, ವಾರಾಹಿ, ಕೇಟಖಿ ನದಿಗಳು ತುಂಬಿ ಹರಿಯುತ್ತಿವೆ. 

ಸೋಮವಾರ ಕುಬ್ಜಾ ನದಿ ಕಮಲಶಿಲೆ ದೇವಸ್ಥಾನ ಪ್ರವೇಶ ಮಾಡಿದ್ದು, ಮಂಗಳವಾರ ಸಾಯಂಕಾಲ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿಯ ಪಾದ ತೊಳೆದಿದ್ದಾಳೆ. ಕುಬ್ಜಾ ನದಿ ದೇವಿ ಪಾದ ಸ್ಪರ್ಶಿಸಿದ್ದರಿಂದ ದೇವಸ್ಥಾನ ಅರ್ಚಕರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ಕುಬ್ಜಾ ನದಿ ದೇವಸ್ಥಾನ ಪ್ರವೇಶಿಸಿ ದೇವಿ ಪಾದ ತೊಳೆಯುತ್ತಾಳೆ ಎಂಬುದು ಭಕ್ತರ ನಂಬಿಕೆ. ಸಾಯಂಕಾಲ ನದಿ ನೀರು ದೇವಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.

ವಾರಾಹಿ ಜಲಾಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ನೀರಿನ ಮಟ್ಟ ಏರುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 563.21 ಆಗಿದೆ. ಹೆಚ್ಚುವರಿ ನೀರು ಯಾವುದೇ ಸಮಯ ಹೊರಬಿಡುವ ಸಾಧ್ಯತೆ ಇದ್ದು, ಹಾಲಾಡಿ ಹಾಗೂ ವಾರಾಹಿ ಕಾಲುವೆ ಪರಿಸರದ ಜನ ಜಾನುವಾರುಗಳ ಸಹಿತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಕರ್ನಾಟಕ ವಿದ್ಯುತ್ ನಿಗಮ ಸೂಚನೆ ನೀಡಿದೆ.

ಇತ್ತೀಚೆಗೆ ಮೂರ್ನಾಲ್ಕು ಬಾರಿ ಮಳೆಗೆ ಸಂಬಂಧಿಸಿ ಜಿಲ್ಲಾಡಳಿತ ರಜೆ ಘೋಷಣೆ ಮಾಡದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ರಜೆ ಸಾರಲಾಗಿದೆ ಎಂದು ಸುಳ್ಳು ಸಂದೇಶ ಹರಡುತ್ತಿದ್ದಾರೆ. ಮಳೆ ಸಂಬಂಧಿಸಿ ಸುಳ್ಳು ಸುದ್ದಿ ಹರಡುವವರ ಮೇಲೆ ಕೇಸು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಎಸ್‌ಪಿಗೆ ಸೂಚನೆ ನೀಡಲಾಗಿದೆ.
ಹೆಪ್ಸಿಬಾ ರಾಣಿ ಕೊರ್ಲಪಾಟಿ ಜಿಲ್ಲಾಧಿಕಾರಿ, ಉಡುಪಿ

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...