ದ್ವಿತೀಯ ಪಿಯು ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತ

Second PUC

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
ಹೊಸ ನಿಯಮದಂತೆ ಇನ್ನು ಮುಂದೆ ಪರೀಕ್ಷಾ ಅವಧಿ ೨ ಗಂಟೆ ೪೫ ನಿಮಿಷ ಇರಲಿದೆ. ಇದುವರೆಗಿನ ಪರೀಕ್ಷೆಗಳಲ್ಲಿ ೩ ಗಂಟೆ ಅವಧಿ ಇರುತ್ತಿತ್ತು. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು ೨ ಗಂಟೆ ೪೫ ನಿಮಿಷ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ ೧೫ ನಿಮಿಷ ನೀಡಲಾಗುತ್ತದೆ. ಈ ಹಿಂದೆ ೩ ಗಂಟೆ ಇದ್ದಾಗಲೂ ಪ್ರಶ್ನೆಗಳ ಓದಿಗೆ ಹೆಚ್ಚುವರಿಯಾಗಿ ೧೫ ನಿಮಿಷ ನೀಡಲಾಗುತ್ತಿತ್ತು.
ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು ೧೦೦ ಅಂಕಗಳಿಗೆ ನಡೆಸಲಾಗುತ್ತಿತ್ತು. ೨೦೨೩-೨೪ನೇ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ, ಪರೀಕ್ಷಾ ಅವಧಿಯನ್ನು ಕಡಿತ ಮಾಡಿರಲಿಲ್ಲ. ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು ೭೦ ಅಂಕಗಳಿಗೆ ಹಾಗೂ ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ ೮೦ ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ವಿದ್ಯಾರ್ಥಿಗಳು ೮೦ ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು ಒಟ್ಟು ೧೨೦ ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ ೮೦ ಅಂಕಗಳಿಗಷ್ಟೇ ಉತ್ತರಿಸಬೇಕು. ೭೦ ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು ೧೦೫ ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ ೭೦ ಅಂಕಗಳಿಗಷ್ಟೇ ಉತ್ತರಿಸಬೇಕು. ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವಾಗ ಪಠ್ಯ ಹೊರತಾದ ಪ್ರಶ್ನೆಗಳಿಗೆ ಅವಕಾಶ ನೀಡಬಾರದು. ಪಠ್ಯಕ್ರಮದಲ್ಲೇ ಇರುವ ವಿಯಷಗಳ ಮೇಲಷ್ಟೇ ಪ್ರಶ್ನೆಗಳನ್ನು ಸಿದ್ಧಪಡಿಸುವುದು ಕಡ್ಡಾಯ ಎಂದು ಮಂಡಳಿ ತಿಳಿಸಿದೆ.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…