More

    ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಿಕೊಳ್ಳಿ

    ಕೋಲಾರ: ರಾಜ್ಯಮಟ್ಟದ ಉದ್ಯೋಗ ಮೇಳವು ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ ಹೆಚ್ಚು ನಿರುದ್ಯೋಗ ಅಭ್ಯರ್ಥಿಗಳು ಪಾಲ್ಗೊಳ್ಳಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

    ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಜಿಲ್ಲಾ ಕೌಶಲ್ಯ ಸಮಿತಿಯ ಸಭೆಯಲ್ಲಿ ಮಾತನಾಡಿ, ನಿರುದ್ಯೋಗಿಗಳಿಗೆ ಕೆಲಸ ಕಲ್ಪಿಸಬೇಕು ಎಂಬ ಉದ್ದೇಶದಿಂದ ಬೃಹತ್​ ಉದ್ಯೋಗ ಮೇಲೆ ಆಯೋಜನೆ ಮಾಡಲಾಗುತ್ತಿದೆ. ಹೆಚ್ಚು ಅಭ್ಯರ್ಥಿಗಳು ನೋಂದಣಿಯಾಗಿ ಕೆಲಸ ಪಡೆದುಕೊಳ್ಳಲು ಮುಂದಾಗಬೇಕು ಎಂದರು.
    ರಾಜ್ಯ ಕೌಶಲ್ಯಾಭವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಯುವ ಸಮೃದ್ಧಿ ಸಮ್ಮೇಳನ ಹಾಗೂ ಬೃಹತ್​ ಉದ್ಯೋಗ ಮೇಳ 2024 ಹಮ್ಮಿಕೊಳ್ಳಲಾಗಿದೆ. ಇದರ ಲಾಭ ಅರ್ಹರಿಗೆ ದೊರೆಯುವಂತೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
    ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಪಾಲ್ಗೊಂಡು ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ಮೇಳದಲ್ಲಿ 500ಕ್ಕೂ ಕಂಪನಿಗಳು ಪಾಲ್ಗೊಳ್ಳಲಿದ್ದು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀೆಯಿದೆ. ವ್ಯಾಸಂಗ ಮುಗಿದು ಕೆಲಸ ಸಿಗದೇ ಪರದಾಡುತ್ತಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳಬೇಕು ಎಮದು ಕೋರಿದರು.
    ನೋಂದಣಿ ಮಾಹಿತಿ ಆಸಕ್ತ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳಲು http://udyogamela.silkllconnect.kaushalkar.com/candidcateRegistration ಜಾಲತಾಣವನ್ನು ಸಂಪರ್ಕಿಸಬಹುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಹೆಚ್ಚು ಪ್ರಚಾರ ಮಾಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಜಿಲ್ಲೆಯ ಎಲ್ಲಾ ಹಾಸ್ಟೇಲ್​ಗಳ ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಿ ಹೆಚ್ಚು ನೋಂದಣಿಯಾಗುವಂತೆ ನೋಡಿಕೊಳ್ಳಬೇಕು ಮಾಡಬೇಕು ಎಂದು ಹೇಳಿದರು.
    ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ಪದ್ಮ ಬಸವಂತಪ್ಪ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪಿ.ನಾಗೇಶ್​, ಜಿಲ್ಲಾ ಕೌಶಲ್ಯಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀನಿವಾಸ್​ ಮತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts