More

    ಪದವೀಧರ ಮತಪಟ್ಟಿಯಲ್ಲಿ ಹೆಸರು ನೋಂದಾಯಿಸಿ

    ಸೇಡಂ: ಈಶಾನ್ಯ ಪದವೀಧರ ಚುನಾವಣೆ ಸಮೀಪಿಸುತ್ತಿದ್ದು, ಮತಕ್ಷೇತ್ರದ ಪದವೀಧರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಮನವಿ ಮಾಡಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸೇಡಂ ಕ್ಷೇತ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪದವೀಧರರಿದ್ದು, ನಿರೀಕ್ಷಿತ ಮಟ್ಟದಲ್ಲಿ ಹೆಸರು ನೋಂದಾಯಿಸದಿರುವುದು ಬೇಸರ ತರಿಸಿದೆ. ಆದ್ದರಿಂದ ತಾಲೂಕಿನ ಎಲ್ಲ ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಮೂಲಕ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಪದವೀಧರರ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರರಾಗಬೇಕಿದೆ ಎಂದು ತಿಳಿಸಿದ್ದಾರೆ.

    ಅರ್ಜಿ ಸಲ್ಲಿಸಲು ನ.6 ಕೊನೆಯ ದಿನವಾಗಿದ್ದು, ಎಲ್ಲ ಪದವೀಧರರು ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ಕಳೆದ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿದವರೂ ಈ ಬಾರಿಯ ಚುನಾವಣೆಯಲ್ಲಿ ಮತ ಚಲಾಯಿಸಲು ಮತ್ತೊಮ್ಮೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts