ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರವೂ ನೋಂದಣಿ

ಬೆಂಗಳೂರು: ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೋಂದಣಿ ಕಚೇರಿ(ಜಿಲ್ಲೆಗೆ ಒಂದರಂತೆ) ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಟ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!

ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…

ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information

ಬೆಂಗಳೂರು:  ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…