21 C
Bengaluru
Thursday, January 23, 2020

ಬದಲಾದ ಪುನರ್ವಸತಿ ಸ್ಥಳ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಸಂತೋಷ ವೈದ್ಯ ಹುಬ್ಬಳ್ಳಿ

ಹುಬ್ಬಳ್ಳಿ ಜನತಾ ಬಜಾರ್ ಮಾರುಕಟ್ಟೆ ನವೀಕರಣದಿಂದ ಸ್ಥಳಾಂತರಗೊಳ್ಳುವ ಅಂಗಡಿಕಾರರಿಗೆ ಪುನರ್ವಸತಿ ಕಲ್ಪಿಸಲು ಹೊಸ ಸ್ಥಳ ಹುಡುಕಲಾಗಿದೆ. ಈಜುಗೊಳ ಸಮೀಪದ ಖಾಸಗಿ ಜಾಗವನ್ನು ಅಂತಿಮಗೊಳಿಸಲು ಮಹಾನಗರ ಪಾಲಿಕೆ ಸಮಾಲೋಚನೆ ನಡೆಸಿದೆ.

ಈ ಮೊದಲಿದ್ದ ಸಂಗೊಳ್ಳಿ ರಾಯಣ್ಣ ವೃತ್ತ-ದಾಜಿಬಾನಪೇಟ ರಸ್ತೆಯನ್ನು ಕೈಬಿಡಲಾಗಿದೆ. ಈಜುಗೊಳ ಸಮೀಪ (ಟ್ರಾಫಿಕ್ ಐಲ್ಯಾಂಡ್ ಬಳಿ) ಹಳ್ಳೂರ ಕುಟುಂಬದವರಿಗೆ ಸೇರಿದ 1 ಎಕರೆ ಜಾಗವಿದೆ. ಜನತಾ ಬಜಾರ್ ಅಂಗಡಿಕಾರರಿಗೆ ಪುನರ್ವಸತಿ ಕಲ್ಪಿಸಲು ಇದು ಮಧ್ಯವರ್ತಿ ಸ್ಥಳ. 1 ವರ್ಷದ ಅವಧಿಗೆ ಬಾಡಿಗೆ ಆಧಾರದಲ್ಲಿ ಪಡೆಯಲು ಜಾಗದ ಮಾಲೀಕರೊಂದಿಗೆ ಪಾಲಿಕೆ ಆಯುಕ್ತರು ಮಾತುಕತೆ ನಡೆಸಿದ್ದಾರೆ. ಅಂದಾಜು 200 ಜನ ಅಂಗಡಿಕಾರರಿದ್ದಾರೆ.

ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಿರುವ ಜನತಾ ಬಜಾರ್ ಮಾರುಕಟ್ಟೆ ಪ್ರದೇಶದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಬಹುಮಹಡಿ ಕಟ್ಟಡ ತಲೆ ಎತ್ತಲಿದೆ. ನಿರ್ಮಾಣ ಹಂತದಲ್ಲಿ ಹಾಲಿ ಇರುವ ಅಂಗಡಿಕಾರರಿಗೆ ಪರ್ಯಾಯ ಸ್ಥಳ ತೋರಿಸಬೇಕು. ಪುನರ್ವಸತಿಗೆ ನಗರ ಪ್ರದೇಶದಲ್ಲಿ ವ್ಯಾಪಾರಕ್ಕೆ ಸೂಕ್ತವಾದ ಪರ್ಯಾಯ ಸ್ಥಳ ಹುಡುಕುವುದೇ ಸವಾಲಿನ ಕೆಲಸವಾಗಿದೆ. ಜೂನ್ (2019) ತಿಂಗಳಿಂದ ಇದು ಇತ್ಯರ್ಥವಾಗಿಲ್ಲ.

ಜನತಾ ಬಜಾರ್ ಸಮೀಪವಿದ್ದ ಸಂಗೊಳ್ಳಿ ರಾಯಣ್ಣ ವೃತ್ತ-ದಾಜಿಬಾನಪೇಟ ರಸ್ತೆಯಲ್ಲಿ ಪುನರ್ವಸತಿಗೆ ಪೊಲೀಸ್ ಇಲಾಖೆ ಸಹಮತ ವ್ಯಕ್ತಪಡಿಸಿಲ್ಲ. ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ವ್ಯಾಪಾರ ನಡೆಸುತ್ತಿದ್ದರೆ ಸಂಚಾರ ಸಮಸ್ಯೆ, ರ್ಪಾಂಗ್ ಸಮಸ್ಯೆ ಉಂಟಾಗಲಿದೆ ಎಂಬುದು ಅವರ ಆಕ್ಷೇಪವಾಗಿತ್ತು. ಮೇಲಾಗಿ ಈ ಮಾರ್ಗದಲ್ಲಿರುವ ಕಾಯಂ ಅಂಗಡಿಕಾರರ, ವಾಣಿಜ್ಯ ಮಳಿಗೆದಾರರ ವಿರೋಧವೂ ಇತ್ತು. ಜತೆಗೆ ಪಾಲಿಕೆ ಯುಜಿಡಿ ಕಾಮಗಾರಿ ಕೈಗೆತ್ತಿಕೊಂಡಿದೆ.

ಅಂಗಡಿಕಾರರ ಸ್ಥಳಾಂತರಕ್ಕೆ ಮೂರುಸಾವಿರ ಮಠದ ಶಾಲಾ ಮೈದಾನ ಹಾಗೂ ಗಿರಣಿಚಾಳ ಪ್ರದೇಶ ಗುರುತಿಸಲಾಗಿತ್ತು. ಇದಕ್ಕೆ ಅಂಗಡಿಕಾರರು ಒಪ್ಪಿರಲಿಲ್ಲ. ಈಗ ಗುರುತಿಸಿರುವ ಸ್ಥಳಕ್ಕೂ ಅಂಗಡಿಕಾರರು ಒಪ್ಪಿಗೆ ಸೂಚಿಸಬೇಕಿದೆ. ಈ ಸಂಬಂಧ ಪಾಲಿಕೆ ಆಯುಕ್ತರು ಅಂಗಡಿಕಾರರ ಸಭೆ ಕರೆಯಬೇಕು. ಬಳಿಕ ಅಂತಿಮ ನಿರ್ಣಯಕ್ಕೆ ಬರಬೇಕಿದೆ.

ಜನತಾ ಬಜಾರ್ ಮಾರುಕಟ್ಟೆ ಸಂಕೀರ್ಣ ನಿರ್ವಣದ ಟೆಂಡರ್ ಅನ್ನು ಸುಜಯಕುಮಾರ ಶೆಟ್ಟಿ ಪಡೆದಿದ್ದಾರೆ. ಬಹುಮಹಡಿ ಕಟ್ಟಡ ನಿರ್ವಣಕ್ಕೆ 9ರಿಂದ 12 ತಿಂಗಳ ಅವಧಿಯ ಷರತ್ತು ವಿಧಿಸಲಾಗಿದೆ. ಬೇಸ್​ವೆುಂಟ್ ಹೊರತು ಪಡಿಸಿ ಒಟ್ಟು 5,066 ಚದರ ಮೀಟರ್ ವಿಸ್ತೀರ್ಣದ ಕಟ್ಟಡ ನಿರ್ವಣವಾಗಲಿದೆ. ಈ ನಡುವೆ ಪುನರ್ವಸತಿ ಸ್ಥಳದಲ್ಲಿ ಶೆಡ್ ಹಾಕಿ ತಾತ್ಕಾಲಿಕ ವ್ಯವಸ್ಥೆಯನ್ನು ಸುಜಯಕುಮಾರ ಅವರೇ ಮಾಡಲಿದ್ದಾರೆ. ಇದಕ್ಕೆ ಸ್ಮಾರ್ಟ್ ಸಿಟಿಯಿಂದ 32 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ.

ಜನತಾ ಬಜಾರ್ ಅಂಗಡಿಕಾರರಿಗೆ ಪುನರ್ವಸತಿ ಕಲ್ಪಿಸಲು ಈಜುಗೊಳದ ಸಮೀಪ ಖಾಸಗಿ ಜಾಗ ಗುರುತಿಸಲಾಗಿದೆ. ಜಾಗದ ಮಾಲೀಕರು ಮೌಖಿಕವಾಗಿ ಒಪ್ಪಿದ್ದಾರೆ. ಬಾಡಿಗೆ ಸಂಬಂಧ ಮಾತುಕತೆ ಪೂರ್ಣಗೊಳಿಸಿ ಲಿಖಿತವಾಗಿ ಬರೆಯಿಸಿಕೊಳ್ಳಬೇಕಿದೆ. ಸ್ಥಳಾಂತರಗೊಳ್ಳುವ ಅಂಗಡಿಕಾರರೊಂದಿಗೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಲಿದ್ದೇವೆ.

| ಡಾ. ಸುರೇಶ ಇಟ್ನಾಳ, ಪಾಲಿಕೆ ಆಯುಕ್ತ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...