ವಿಜೃಂಭಣೆಯ ಮರುಡೇಶ್ವರಸ್ವಾಮಿ ಬ್ರಹ್ಮ ರಥೊತ್ಸವ

ತಿ.ನರಸೀಪುರ: ಷಷ್ಠಿ ಹಬ್ಬದ ಅಂಗವಾಗಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶ್ರೀ ಮರುಡೇಶ್ವರಸ್ವಾಮಿಯ ಬ್ರಹ್ಮ ರಥೊತ್ಸವ ಗುರುವಾರ ವಿಜೃಂಭಣೆಯಿಂದ ನೆರವೇರಿತು.

ಮರುಡೇಶ್ವರಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಮುಂಜಾನೆಯಿಂದಲೇ ಶ್ರೀ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಮಹಮಂಗಳಾರತಿ ಮಾಡಲಾಯಿತು. ಹರಕೆ ಹೊತ್ತ ಭಕ್ತರು ಕಾವೇರಿ ನದಿಯಲ್ಲಿ ಸ್ನಾನ ಮಾಡಿ ದೇವಾಲಯದ ಪಕ್ಕದಲ್ಲಿರುವ ಹುತ್ತಕ್ಕೆ ಹಾಲೆರದು ಸ್ವಾಮಿಯ ದರ್ಶನ ಪಡೆದರು.

ನಂತರ ಮರುಡೇಶ್ವರಸ್ವಾಮಿ, ಗಣೇಶ, ಸುಬ್ರಮಣ್ಯ ಉತ್ಸವ ಮೂರ್ತಿಗಳನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತಂದು ಪೂಜೆ ನೆರವೇರಿಸಲಾಯಿತು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ರಥವನ್ನು ಎಳೆದರು.

ನಂಜುಡೇಶ್ವರ ರೈಸ್ ಮಿಲ್ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.