ಆರೋಪಿಯೊಬ್ಬನನ್ನು ಬಂಧಿಸಲು ಹೋದಾಗ ಪೊಲೀಸ್ ಸಿಬ್ಬಂದಿಯನ್ನೇ ಥಳಿಸಿದ ಆರೋಪಿ ಸಂಬಂಧಿಕರು| Thrashed

Untitled design (45)
Published on

Thrashed: ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದ್ದ ಆರೋಪಿಯೊಬ್ಬನ್ನು ಬಂಧಿಸಲು ತೆರಳಿದ್ದಾಗ, ಪೊಲೀಸ್ ಸಿಬ್ಬಂದಿ ಮೇಲೆಯೇ ಆರೋಪಿ ಸಂಬಂಧಿಕರು ಮತ್ತು ಬೆಂಬಲಿಗರು ದಾಳಿ ನಡೆಸಿ ಗಾಯಗೊಳಿಸಿದ್ದಾರೆ ಎಂದು ಬುಧವಾರ(ಸೆ. 17) ವರದಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದ್ದ ಅಜಮ್ ಎಂಬ ವ್ಯಕ್ತಿಯನ್ನು ಬಂಧಿಸಲು ಪೊಲೀಸ್ ತಂಡ ಚಂದನ್ ಹೋಲಾ ಗ್ರಾಮಕ್ಕೆ ಹೋಗಿತ್ತು ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿ ಆರೋ‘ಪಿಯನ್ನು ಬಂಧಿಸಲು ಯತ್ನಿಸಿದಾಗ, ಕೆಲವು ಸಂಬಂಧಿಕರು ಅಡ್ಡಿಪಡಿಸಿ, ಪೊಲೀಸರ ಮೇಲೆ ಹಿಂಸಾತ್ಮಕವಾಗಿ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಈ ಘರ್ಷಣೆಯಲ್ಲಿ ಹಲವಾರು ಸಿಬ್ಬಂದಿ ಗಾಯಗೊಂಡಿದ್ದು, ಬಳಿಕ ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಯಿತು. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿರುವುದು ವಿಡಿಯೋಗಳಲ್ಲಿ ದಾಖಲಾಗಿದೆ. ದಾಳಿಕೋರರಲ್ಲಿ ಒಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿರುವುದನ್ನು ಕಂಡು ಬಂದಿದೆ.

ಗಾಯಾಳು ಸಿಬ್ಬಂದಿ ಹೇಳಿಕೆಗಳ ಆಧಾರದ ಮೇಲೆ ಆರೋಪಿ ಅಜಮ್ ಮತ್ತು ಹಲ್ಲೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.  ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net