More

    ಟಿಆರ್​ಎಸ್​ ಶಾಸಕರಿಗೆ ಆಮಿಷ ಪ್ರಕರಣ: ಬಿ.ಎಲ್​.ಸಂತೋಷ್​​ ಡಿ. 5ರ ವರೆಗೂ ನಿರಾಳ..

    ತೆಲಂಗಾಣ: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್​​ ಡಿ. 5ರ ವರೆಗೂ ನಿರಾಳರಾಗುವಂತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್​ ಶುಕ್ರವಾರ ತಡೆ ನೀಡಿದೆ.

    ಟಿಆರ್​ಎಸ್​​ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್​.ಸಂತೋಷ್​ಗೆ ತೆಲಂಗಾಣ ವಿಶೇಷ ತನಿಖಾ ತಂಡ (ಎಸ್‌ಐಟಿ) ಕಳೆದ ಶುಕ್ರವಾರ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ ತಪ್ಪಿದರೆ ಬಂಧನದ ಎಚ್ಚರಿಕೆಯನ್ನೂ ಕೊಟ್ಟಿತ್ತು.

    ಅದಾಗ್ಯೂ ಸಂತೋಷ್ ವಿಚಾರಣೆ ಹಾಜರಾಗದ್ದರಿಂದ ಕೋರ್ಟ್ ನಿರ್ದೇಶನದ ಮೇರೆಗೆ ಎಸ್​ಐಟಿ ಮತ್ತೊಂದು ನೋಟಿಸ್ ಜಾರಿ ಮಾಡಿ, ನ. 26 ಅಥವಾ ನ. 28ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಂತೋಷ್​​ಗೆ ಸೂಚನೆ ನೀಡಿತ್ತು. ಈ ನೋಟಿಸ್ ರದ್ದು ಗೊಳಿಸುವಂತೆ ಕೋರಿ ಸಂತೋಷ್ ಕಡೆಯಿಂದ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಸಂಬಂಧ ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಡಿ. 5ರ ಗಡುವನ್ನು ನೀಡಿದೆ. ಈ ಪ್ರಕರಣದಲ್ಲಿ ಸಂತೋಷ್ ಜತೆಗೆ ಇತರ ಮೂವರನ್ನು ಆರೋಪಿಗಳನ್ನಾಗಿ ಎಸ್​ಐಟಿ ಹೆಸರಿಸಿದೆ.

    ‘ದೈವ ದೇವರೆಂದರೆ ತಮಾಷೆಯಾ?’; ‘ಕಾಂತಾರ’ದ ‘ವರಾಹ ರೂಪಂ’ ಗೀತೆ ರಚಿಸಿದ ಸಾಹಿತಿ ಹೀಗಂದಿದ್ದೇಕೆ?

    ಬೆಲ್ಜಿಯಂ ಬೆಡಗಿ ಜತೆ ಹಂಪಿ ಆಟೋಚಾಲಕನ ಮದ್ವೆ; 3 ವರ್ಷದ ಹಿಂದೆ ಗೈಡ್​ಗೆ ಫಿದಾ ಆಗಿದ್ದ ವಿದೇಶಿ ಯುವತಿ, ಇಂದು ಲಗ್ನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts