ಬೆಂಗಳೂರು : ಬೆಂಗಳೂರು ನಗರದಲ್ಲಿ ಸುಗಮ ಸಂಚಾರದ ಸಲುವಾಗಿ ಭಾರೀ ಸರಕು ಸಾಗಣೆ ವಾಹನಗಳಿಗೆ ವಿಧಿಸಲಾಗಿದ್ದ ಸಮಯ ಅವಕಾಶವನ್ನು ಸಡಿಲಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ಆದೇಶಿಸಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯ ಪ್ರದೇಶದ ಒಳಭಾಗದಲ್ಲಿ ಬೆಳಗ್ಗೆ 7 ರಿಂದ 11 ಗಂಟೆ ಹಾಗೂ ಸಂಜೆ 4 ರಿಂದ ರಾತ್ರಿ 10 ಗಂಟೆವರೆಗೆ ವಾರದ ಎಲ್ಲ ದಿನಗಳಂದು ಭಾರೀ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಶನಿವಾರಗಳಂದು ಮಾತ್ರ ಭಾರೀ ವಾಹನಗಳಿಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 2.30ವರೆಗೂ ಹಾಗೂ ಸಂಜೆ 4.30ರಿಂದ ರಾತ್ರಿ 9 ಗಂಟೆವರೆಗೂ ನಿಷೇಧಿಸಿ ಆದೇಶ ಮಾರ್ಪಾಡು ಮಾಡಲಾಗಿದೆ. ಇನ್ನುಳಿದಂತೆ ವಾರದ 6 ದಿನಗಳಲ್ಲಿ ಮೊದಲಿನಂತೆಯೇ ಮುಂದುವರಿಯಲಿದೆ ಎಂದು ಅನುಚೇತ್ ಮಾಹಿತಿ ನೀಡಿದ್ದಾರೆ.