

ಬೆಂಗಳೂರು: ತಂಬಾಕು ಮಾರಾಟದ ಮೇಲಿನ ನಿರ್ಬಂಧ ಸಡಿಲಿಕೆ ಮಾಡುವ ಮೂಲಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ(Relaxation of restrictions on tobacco sales; historic decision) ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ.
ಈ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ಬೆಳೆಗಾರರಿಗೆ ಶಕ್ತಿ ಬರಲಿದೆ. ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಮಿಡಿದಿರುವ ಪ್ರಧಾನಿ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ರಾಜ್ಯದ ರೈತಬಂಧುಗಳ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದ 53,325 ಹೆಕ್ಟೇರ್ ಪ್ರದೇಶದಲ್ಲಿ ಎಫ್‌ಸಿವಿ ತಂಬಾಕು ಬೆಳೆಯಲಾಗುತ್ತಿದೆ. 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಇದ್ದು, ಬೆಳೆಯುತ್ತಿದ್ದಾರೆ. ಇವರೆಲ್ಲರಿಗೂ ಕೇಂದ್ರದ ನಿರ್ಧಾರದಿಂದ ಅನುಕೂಲ ಆಗಲಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.