More

    ಹಾಲು ಉತ್ಪಾದಕರ ಬಾಕಿ ಹಣ ಬಿಡುಗಡೆ ಮಾಡಿ

    ರಾಯಚೂರು: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ ಸಹಾಯಧನವನ್ನು ಬಿಡುಗಡೆ ಮಾಡಬೇಕು, ರೈತ ವಿರೋ ನೀತಿಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಬಿಜೆಪಿ ನಗರ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 726 ಕೋಟಿ ರೂ. ಬಾಕಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದು ಬೊಟ್ಟು ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
    ಮಾಜಿ ಎಂಎಲ್ಸಿ ಎನ್. ಶಂಕ್ರಪ್ಪ ಮಾತನಾಡಿ,ರಾಜ್ಯ ಸರ್ಕಾರ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ, ಮಾತನಾಡಿದರೆ ಸಾಕು ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುತ್ತಿದೆ. ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲವೆಂದು ಧರಣಿ ಮಾಡಲು ಹೊರಟಿದ್ದಾರೆ.
    ರಾಜ್ಯದಲ್ಲಿ ಕಳೆದ 8 ತಿಂಗಳಲ್ಲಿ 716 ಕೋಟಿ ರೂ.ಹಾಲು ಉತ್ಪಾದಕರಿಗೆ ಬಾಕಿ ಹಣ ನೀಡಿಲ್ಲ. ಹಾಲು ಮಾರಾಟ ಮಾಡಿ ಜೀವನ ನಡೆಸುವ ರೈತರಿಗೆ ಯಾವುದೇ ಸಹಾಯಧನ ನೀಡಿಲ್ಲ. ಹಾಲಿಗೆ ಬೆಂಬಲ ಬೆಲೆ ನೀಡಲು ಸರ್ಕಾರದ ಕರ್ತವ್ಯವಾಗಿದೆ. ಆದರೆ ಇದನ್ನು ಮರೆತಿದೆ.
    ಹಿಂದೆ ಬಿಜೆಪಿ ಸರ್ಕಾರದಲ್ಲಿ ಹಾಲು ಉತ್ಪಾದಕರಿಗೆ ಬೆಂಬಲ ಬೆಲೆ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಅಂಚಿಗೆ ತಂದಿದೆ. ಜತೆಗೆ ರಾಜ್ಯದಲ್ಲಿ ತೀವ್ರ ಬರ ಇದ್ದರೂ ರೈತರಿಗೆ ನೆರವಿಗೆ ಬಾರದೆ ತನ್ನ ಜವಾಬ್ಧಾರಿಯಿಂದ ನುಣಚಿಕೊಂಡು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ ಎಂದು ದೂರಿದರು.
    ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ಗೋವಿಂದ, ಮುಖಂಡರಾದ ಜಿ.ಶಂಕರರೆಡ್ಡಿ, ಬಂಡೇಶ ವಲ್ಕಂದಿನ್ನಿ, ರಾಜಕುಮಾರ, ಶಶಿರಾಜ ಮಸ್ಕಿ, ರಾಘವೇಂದ್ರ ಉಟ್ಕೂರು, ಎನ್.ಶ್ರೀನಿವಾಸರೆಡ್ಡಿ, ಗಿರೀಶ ಕನಕವೀಡು, ಎ.ಚಂದ್ರಶೇಖರ, ರಾಮಚಂದ್ರ ಕಡಗೋಲ, ವಿಜಯರಾಜೇಶ್ವರಿ, ಶರಣಮ್ಮ ಕಾಮರೆಡ್ಡಿ, ಮಹೇಂದ್ರರೆಡ್ಡಿ, ಯು.ನರಸಿಂಹಲು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts