

ಬೆಂಗಳೂರು: ರಾಜ್ಯದ ಏಳು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 77 ಕೈದಿಗಳನ್ನು ಮಂಗಳವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು.
ಸನ್ನಡತೆ ಆಧಾರದ ವರ್ಷದಲ್ಲಿ ಮೂರು ಬಾರಿ ಜೈಲಿನ ಕೈದಿಗಳನ್ನು ಬಿಡುಗಡೆಗೊಳಿಸುವ ಆದೇಶದನ್ವಯ, ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ 77 ಕೈದಿಗಳನ್ನು ಅವಧಿಪೂರ್ವ ಬಿಡುಗಡೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರು. ಆ ಬಳಿಕ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೂ 34 ಕೈದಿಗಳು ಬಿಡುಗಡೆಯಾದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬಂಧನದಿಂದ ಬಿಡುಗಡೆಯಾದ ಕೈದಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಇದೇ ವೇಳೆ ಮೈಸೂರು ಕೇಂದ್ರ ಕಾರಾಗೃಹದಿಂದ 7, ಬೆಳಗಾವಿ 5 , ಕಲಬುರಗಿ ಜೈಲಿನಿಂದ 9 , ವಿಜಯಪುರ ಕಾರಾಗೃಹದಿಂದ 6, ಬಳ್ಳಾರಿ ಕೇಂದ್ರ ಕಾರಾಗೃಹದಿಂದ 10, ಧಾರವಾಡ ಜೈಲಿನಿಂದ 6 ಕೈದಿಗಳು ಬಿಡುಗಡೆಯಾದರು.
ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಇನ್ನುಮುಂದೆ ಸನ್ನಡತೆ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ಬದಲು ಮೂರು ಬಾರಿ ಕೈದಿಗಳನ್ನು ಬಂಧಮುಕ್ತಗೊಳಿಸಲಾಗುವುದು ಎಂದರು. ಈಗ ವರ್ಷಕ್ಕೆ ಎರಡು ಬಾರಿ ಸ್ವಾತಂತ್ರ್ಯೋತ್ಸವದ ವೇಳೆ ಮತ್ತು ಗಣರಾಜ್ಯೋತ್ಸವದ ವೇಳೆ ಮಾತ್ರ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಇನ್ನುಮುಂದೆ ಸನ್ನಡತೆ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ಬದಲು ಮೂರು ಬಾರಿ ಕೈದಿಗಳನ್ನು ಬಂಧಮುಕ್ತಗೊಳಿಸಲಾಗುವುದು ಎಂದರು.
ಈಗ ವರ್ಷಕ್ಕೆ ಎರಡು ಬಾರಿ ಸ್ವಾತಂತ್ರ್ಯೋತ್ಸವದ ವೇಳೆ ಮತ್ತು ಗಣರಾಜ್ಯೋತ್ಸವದ ವೇಳೆ ಮಾತ್ರ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಸನ್ನಡತೆಯ ಮೇಲೆ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ 'ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ' ಎಂದು ಹೇಳಿದ್ದಾನೆ. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ ಎಂದು ಸಚಿವರು ತಿಳಿಸಿದರು.