

ಮೂಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮಾ.12 ರಿಂದ 18ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಮಾಜಿ ಕಾರ್ಯದರ್ಶಿ ಡಾ.ಪಿ.ವಿ.ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮುಲ್ಕಿ ವಿಜಯ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ, ಕ್ಷೇತ್ರದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಚಂದ್ರಹಾಸ ಶಿಮಂತೂರು, ಉದ್ಯಮಿ ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ, ಶಿಮಂತೂರು ಯುವಕ ಮಂಡಲ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.