More

    ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುಗಡೆ

    ಕೆ.ಆರ್.ಸಾಗರ: ಜನ-ಜಾನುವಾರು ಹಾಗೂ ಅಂರ್ತಜಲ ಹೆಚ್ಚಿಸುವ ದೃಷ್ಟಿಯಿಂದ ಕೆ.ಆರ್.ಸಾಗರ ಅಣೆಕಟ್ಟೆಯಿಂದ ವಿಶ್ವೇಶ್ವರಯ್ಯ ನಾಲೆ ಸೇರಿದಂತೆ ಅಣೆಕಟ್ಟು ಮತ್ತು ನದಿ ಪಾತ್ರದ ಎಲ್ಲ ನಾಲೆಗಳಿಗೆ ಸೋಮವಾರ ನೀರು ಮಾಡಲಾಯಿತು.

    ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಇಲ್ಲಿನ ಕಾವೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನೀರಾವರಿ ಸಲಹೆ ಸಮಿತಿಯ ತೀರ್ಮಾನದಂತೆ ನಾಲಾ ಪಾತ್ರದ ಗ್ರಾಮಗಳ ಜನ-ಜಾನುವಾರುಗಳಿಗೆ ಕುಡಿಯಲೆಂದು ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ನಾಲೆಯಲ್ಲಿ ಬಿಟ್ಟಿರುವ ನೀರನ್ನು ಯಾವುದೇ ಬೆಳೆಗಳಿಗೆ ಉಪಯೋಗ ಮಾಡದಂತೆ ಈ ಮೊದಲೇ ತಿಳಿಸಲಾಗಿದೆ.

    ಕುಡಿಯುವ ನೀರಿಗಾಗಿ ನೀರು ಹರಿಸುವಂತೆ ಇತ್ತೀಚೆಗೆ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ನಾಲಾ ಪಾತ್ರದ ಗ್ರಾಮಗಳ ನೂರಾರು ರೈತರು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹದು.

    ಯಾವುದೇ ರೀತಿಯ ಬೆಳೆಗಳನ್ನು ಬೆಳೆಯದಂತೆ ತಿಳಿಸಿ ನೀರು ಹರಿಸಲಾಗುತ್ತಿದ್ದು, ಪ್ರಸ್ತುತ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 96.58 ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಅಣೆಕಟ್ಟೆಯಲ್ಲಿ 118.54 ಅಡಿ ಒಳಹರಿವು 666 ಕ್ಯೂಸೆಕ್ ಹೊರ ಹರಿವು ಇತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರ ಈ ಬಾರಿ 22 ಅಡಿಯಷ್ಟು ನೀರಿನ ಸಂಗ್ರಹ ಕಡಿಮೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts