More

  ಬಾಕಿಯಿರುವ ಅನುದಾನ ಬಿಡುಗಡೆ ಮಾಡಿ

  ಚಿಕ್ಕಮಗಳೂರು: ರೈತ ಉತ್ಪಾದಕರ ಸಂಸ್ಥೆಗಳಿಗೆ ಬಾಕಿಯಿರುವ ಹಣವನ್ನು ರಾಜ್ಯಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿಗೆ ಮನವಿ ಸಲ್ಲಿಸಿದರು.
  ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶಂಭೈನೂರು ಆನಂದಪ್ಪ ಮಾತನಾಡಿ, ನಬಾರ್ಡ್ ಪ್ರಾಯೋಜಿತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪ್ರಧಾನಮಂತ್ರಿಗಳ 10 ಸಾವಿರ ರೈತ ಉತ್ಪಾದಕರ ಯೋಜನೆಯಡಿ 710 ರೈತ ಉತ್ಪಾದಕರ ಸಂಸ್ಥೆಗಳು ಪ್ರಾರಂಭವಾಗಿವೆ ಎಂದರು.
  ರಾಜ್ಯದಲ್ಲಿ 490 ರೈತ ಉತ್ಪಾದಕರ ಸಂಸ್ಥೆಗಳಿಗೆ 150 ಕೋಟಿ ರೂ. ನೀಡಬೇಕಿದ್ದು, ಇದರಲ್ಲಿ ಶೇ.12ರಷ್ಟು ಮಾತ್ರ ಅನುದಾನವನ್ನು ರಾಜ್ಯಸರ್ಕಾರ ಬಿಡುಗಡೆ ಮಾಡಿದೆ. ಇನ್ನುಳಿದ ಶೇ.82ರಷ್ಟು ಅನುದಾನ ನೀಡದಿರುವುದರಿಂದ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿ ಕುಂಠಿತವಾಗಿದೆ ಎಂದು ದೂರಿದರು.
  ಪ್ರಸ್ತುತ ಶೇ.12ರಷ್ಟು ಅನುದಾನ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾಗಿತ್ತು. ರಾಜ್ಯಸರ್ಕಾರ ಉಳಿದ ಶೇ.82 ರಷ್ಟು ಬಾಕಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆಗೊಳಿಸದಿದ್ದರೆ 10 ಲಕ್ಷ ರೈತರು ಮತ್ತು 12 ಸಾವಿರ ರೈತ ಉತ್ಪಾದಕರ ಸಂಸ್ಥೆಗಳ ನಿರ್ದೇಶಕರಿಗೆ ತೀವ್ರ ಸಮಸ್ಯೆ ಎದುರಾಗಲಿದೆ ಎಂದರು.
  ಕೂಡಲೇ ಬಾಕಿಯಿರುವ ಅನುದಾನವನ್ನು ರೈತ ಉತ್ಪಾದಕರ ಸಂಸ್ಥೆಗಳಿಗೆ ಬಿಡುಗಡೆಗೊಳಿಸಿ ಅಭಿವೃದ್ಧಿಗೆ ಸಹಕರಿಸಬೇಕು. ವಿಳಂಬ ಧೋರಣೆ ಅನುಸರಿಸಿದರೆ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನೀತಿ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
  ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್, ದಿನೇಶ್ ಪಾದಮನೆ, ಉಪಾಧ್ಯಕ್ಷ ನಾಗರಾಜ್, ನಗರ ಮಂಡಲ ಅಧ್ಯಕ್ಷ ನಿಶಾಂತ್, ಸತೀಶ್ ಕುಪ್ಪೆನಹಳ್ಳಿ ಮತ್ತಿತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts