

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತವಾದಂತೆ ಇಂದು ರಾಜ್ಯವ್ಯಾಪಿ ಬಂದ್ ಮಾಡುವ ಮೂಲಕ ವಿವಿಧ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಕರೆ ಕೊಟ್ಟಿವೆ. ಅದರಂತೆಯೇ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕೂಡ ಬಂದ್ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
"ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲ-ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು" ಎಂದು ಹೇಳಿದರು.
"ಕಾಂಗ್ರೆಸ್ ಸರಕಾರವೂ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು" ಎಂದು ಹೇಳಿದ್ದಾರೆ.