More

    ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ

    ರಾಯಚೂರು: ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ವೇಣುಗೋಪಾಲಗೆ ಮನವಿ ಸಲ್ಲಿಸಿ, ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿರುವುದರಿಂದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವಂತಾಗಿದ್ದು, ಉನ್ನತ ಶಿಕ್ಷಣ ಮರಿಚಿಕೆಯಾಗುವಂತಾಗಿದೆ ಎಂದು ದೂರಿದರು.
    ಸರ್ಕಾರ ವಿದ್ಯಾರ್ಥಿ ವೇತನದ ರೂಪದಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಬೆಂಬಲ ನೀಡುತ್ತದೆ ಎಂದು ವಿದ್ಯಾರ್ಥಿಗಳು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ಸಕಾರ ವಿದ್ಯಾರ್ಥಿ ವೇತನ ನೀಡುವುದರಲ್ಲಿಯೂ ರಾಜಕೀಯ ಮುಂದುವರಿಸಿರುವುದರಿಂದ ವಿದ್ಯಾರ್ಥಿಗಳ ಸ್ಥಿತಿ ಶೋಚನೀಯವಾಗಿದೆ.
    ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆಯಲು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
    ಆದರೆ ಸರ್ಕಾರ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳನ್ನು ಅತಂತ್ರ ಸ್ಥಿತಿಯಲ್ಲಿಟ್ಟಿದೆ. ವಿದ್ಯಾರ್ಥಿ ವೇತನ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. 2022-23ನೇ ಸಾಲಿನಲ್ಲಿ ಮಂಜೂರಾದ ವಿದ್ಯಾರ್ಥಿ ವೇತನ ತಡೆ ಹಿಡಿದು ಅನುದಾನವನ್ನು ಇನ್ನಿತರ ಕಾರ್ಯಗಳಿಗೆ ಬಳಸಲಾಗುತ್ತಿದೆ. ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆಗೆ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಪ್ರತಿಭಟನೆಯಲ್ಲಿ ಎಬಿವಿಪಿ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ, ಪದಾಕಾರಿಗಳಾದ ರವಿಗೌಡ, ಶಾಂತಕುಮಾರ, ರಾಚನಗೌಡ, ರವಿ, ನವೀನ್, ಚರಣ್, ಮಹೇಶ, ವರದರಾಜ್, ಮಲ್ಲೇಶ, ಶ್ರೀನಿವಾಶ, ಸುರೇಶ, ವಸಂತ, ಸುಮಂಗಲಾ, ಮಂಜುಳಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts