ಶಾಲೆ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳ ಕೊಡುಗೆ

logo
ಹಳೇ ವಿದ್ಯಾರ್ಥಿ ಸಂಘ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿರಜತ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
Published on

ಗಂಗೊಳ್ಳಿ: ಹಳೇ ವಿದ್ಯಾರ್ಥಿಗಳು ಶಾಲೆಯ ಬೆನ್ನೆಲುಬು. ಶಾಲೆಯ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳ ಕೊಡುಗೆ ಅಪಾರ ಎಂದು ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ ಹೇಳಿದರು.

ಹಳೇ ವಿದ್ಯಾರ್ಥಿ ಸಂಘ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಆಶ್ರಯದಲ್ಲಿ ಶಾಲೆಯ ಸಭಾಂಗಣದಲ್ಲಿ ಹಳೇ ವಿದ್ಯಾರ್ಥಿ ಸಂಘದ ರಜತ ಮಹೋತ್ಸವದ ಲಾಂಛನ ಭಾನುವಾರ ಬಿಡುಗಡೆಗೊಳಿಸಿ ಮಾತನಾಡಿದರು.

ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ರಾಮನಾಥ ಚಿತ್ತಾಲ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಗೋಪಾಲ ನಾಯ್ಕ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ, ಉಪಾಧ್ಯಕ್ಷೆ ಗಾಯತ್ರಿ ಕೊಡಂಚ, ಮುಖ್ಯ ಶಿಕ್ಷಕ ಗಂಗಾಧರ ಬಂಟ, ರಾಘವೇಂದ್ರ ವಿ.ಮೇಸ್ತ, ಜಿ.ರೋಹಿದಾಸ ನಾಯಕ್, ಶ್ರೀಧರ ಪೂಜಾರಿ, ಮಸೂದ್, ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಎಸ್‌ಡಿಎಂಸಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ರಾಘವೇಂದ್ರ ಡಿ. ಸ್ವಾಗತಿಸಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಗಣೇಶ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಸಮಿತಿ ಗೌರವಾಧ್ಯಕ್ಷ ಎ.ಆರ್.ವಲಿವುಲ್ಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net