More

    ಮಳೆ ಹಾನಿ ಸಮೀಕ್ಷೆ ನಡೆಸಿ

    ಶಿವಮೊಗ್ಗ: ಕಳೆದೊಂದು ವಾರದಿಂದ ಅಕಾಲಿಕ ಮಳೆಗೆ ಹಾನಿಗೀಡಾದ ಭತ್ತ, ಅಡಕೆ, ಶುಂಠಿ ಮುಂತಾದ ಬೆಳೆಗಳ ಸಮೀಕ್ಷೆ ನಡೆಸಿ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

    ಭತ್ತದ ಪೈರು ಕಟಾವು ಮಾಡಿದ ಬಳಿಕ ಗದ್ದೆಯಲ್ಲೇ ಉಳಿದ ಕಾರಣ ನೀರು ನಿಂತು ರೈತರಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಅಡಕೆ ಸಂಸ್ಕರಣೆಗೂ ಸಮಸ್ಯೆಯಾಗಿದ್ದು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಕಣದಲ್ಲಿ ಒಣ ಹಾಕಿದ್ದ ಶುಂಠಿ ನೀರಿನಿಂದ ಹಾಳಾಗಿದೆ. ಇದೆಲ್ಲವುಗಳ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಮೀಕ್ಷೆ ನಡೆಸಬೇು ಎಂದು ಶನಿವಾರ ಜಿಪಂನಲ್ಲಿ ಹ್ಮಮಿೊಂಡಿದ್ದ ಕೆಡಿಪಿ ಸಭೆಯಲ್ಲಿ ಹೇಳಿದರು.

    ಬೆಳೆ ಹಾನಿ ಸಮೀಕ್ಷೆ ಕುರಿತು ಮಾಹಿತಿ ನೀಡಿದ ಡಿಸಿ ಕೆ.ಬಿ.ಶಿವಕುಮಾರ್, ಈಗಾಗಲೇ ಅಂದಾಜು 40 ಹೆಕ್ಟೇರ್​ನಲ್ಲಿ ಹಾನಿಗೊಳಗಾದ ಭತ್ತದ ಸಮೀಕ್ಷೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ನಷ್ಟದ ಸಂಪೂರ್ಣ ಮಾಹಿತಿ ಪಡೆದು ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.

    ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಎಂ.ಕಿರಣ್​ಕುಮಾರ್ ಮಾತನಾಡಿ, ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲೂಕಿನ ತುಮರಿ ಭಾಗದಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತದ ನಾಟಿ ವಿಳಂಬವಾದ ಕಾರಣ ಕೊಯ್ಲು ತಡವಾಗಿತ್ತು. ಕೊಯ್ಲು ಮಾಡಿದ ಫಸಲು ಅಕಾಲಿಕ ಮಳೆಯಿಂದ ಹಾನಿಗೊಳಗಾಗಿದೆ ಎಂದು ವಿವರಿಸಿದರು.

    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಡಿಸಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಶಾಸಕರಾದ ಕುಮಾರ್ ಬಂಗಾರಪ್ಪ, ಕೆ.ಬಿ.ಅಶೋಕನಾಯ್್ಕ ಹರತಾಳು ಹಾಲಪ್ಪ, ಬಿ.ಕೆ.ಸಂಗಮೇಶ್ವರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts