More

    ಪರಿಹಾರ ವಿತರಣೆಗೆ ಗ್ರಾಮ ಪಂಚಾಯಿತಿಯಿಂದ ಡಂಗುರ


    ಚಿಕ್ಕೋಡಿ: ತಾಲೂಕಿನ 17 ಸಾವಿರ ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ 5 ಸಾವಿರ ರೂ. ಪರಿಹಾರ ಧನ ನೀಡಲು ಮುಂದಾಗಿದ್ದು, ಗ್ರಾಮ ಪಂಚಾಯಿತಿಗಳಿಂದ ಡಂಗುರ ಸಾರುವ ಮೂಲಕ ಅರ್ಹರಿಗೆ ಯೋಜನೆಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.

    ಪಟ್ಟಣದ ಲೋಕೋಪಯೋಗಿ ಸಮುದಾಯ ಭವನದಲ್ಲಿ ಹೂವು ಬೆಳೆಗಾರರು, ಅಗಸರು, ಕ್ಷೌರಿಕರು, ನೇಕಾರರು, ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರದ ಯೋಜನೆ ತಲುಪಿಸುವ ಹಿನ್ನೆಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಸರ್ಕಾರಿ ಸೌಲಭ್ಯಗಳ ಮಾಹಿತಿಯನ್ನು ನೋಟಿಸ್ ಬೋರ್ಡ್ ಮೇಲೆ ಹಚ್ಚಬೇಕು. ಬಾಕಿ ಫಲಾನುಭವಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳು ಹಾಗೂ ಇತರೆ ಸಿಬ್ಬಂದಿ ಮಾಡಬೇಕು ಎಂದು ಸೂಚಿಸಿದರು.

    16ಕ್ಕೆ ಸಚಿವ ರಮೇಶ ಜಾರಕಿಹೊಳಿ ಭೇಟಿ

    ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಮಹಾರಾಷ್ಟ್ರದಿಂದ ಹರಿದು ಬರುವ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ ಬ್ಯಾರೇಜ್ ಶಿಥಿಲಾವಸ್ಥೆಗೆ ತಲುಪಿದ್ದು, ಅದನ್ನು ಪುನರ್‌ನಿರ್ಮಾಣ ಮಾಡಬೇಕೆಂಬ ಬೇಡಿಕೆ ಇದೆ. ಹೀಗಾಗಿ ಬ್ಯಾರೇಜ್ ವೀಕ್ಷಣೆಗೆ ಜೂ. 16ರಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ಬ್ಯಾರೇಜ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಎರಡು ಸಲ ಸಚಿವರು ಹಾಗೂ ಮಾಜಿ ಸಂಸದರು ಹಾಗೂ ಹಾಲಿ ಶಾಸಕರು ಭೂಮಿ ಪೂಜೆ ಮಾಡಿರುವುದು ವಿಪರ್ಯಾಸ ಎಂದು ಹಾಸ್ಯವಾಗಿ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts