ಸಿಎಂ ಬಿಎಸ್​ವೈಗೆ ಬಿಗ್​ ರಿಲೀಫ್​ ನೀಡಿದ ಸುಪ್ರೀಂಕೋರ್ಟ್​

BSY JPG
Published on

ಬೆಂಗಳೂರು: ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿರುವುದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ

ಸಿಎಂ ಬಿಎಸ್​ವೈ ವಿರುದ್ಧ ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿನ ಕೆಐಎಡಿಬಿಗೆ ಸಂಬಂಧಿಸಿದ 20 ಎಕರೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪವಿದೆ.

ಈ ಸಂಬಂಧ 2012ರಲ್ಲಿ ಲೋಕಾಯುಕ್ತವು ಚಾರ್ಜ್​ಶೀಟ್​ ಸಲ್ಲಿಸಿತ್ತು. ಚಾರ್ಜ್​ಶೀಟ್​ ಪರಿಗಣಿಸಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್​ ಸೂಚನೆ ನೀಡಿತ್ತು.

ಇದರ ಬೆನ್ನಲ್ಲೇ ಸಿಎಂ ಬಿಎಸ್​ವೈ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ತನಿಖೆಗೆ ತಡೆ ನೀಡುವಂತ ಅರ್ಜಿಯಲ್ಲಿ ಕೋರಿದ್ದರು. ಅದರಂತೆ ಇಂದು ಆದೇಶ ಹೊರಡಿಸಿದ ಸುಪ್ರೀಂಕೋರ್ಟ್​ ಹೈಕೋರ್ಟ್​ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net