More

    ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್​ ರಿಲೀಫ್: 3 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು

    ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಅವರಿಗೆ ಬಿಗ್​ ರಿಲೀಫ್​ ದೊರೆತಿದೆ.

    ಈಗ ವಿರೋಧ ಪಕ್ಷದ ನಾಯಕ ಹಾಗೂ ತೆಲುಗು ದೇಶ ಪಾರ್ಟಿ ಮುಖ್ಯಸ್ಥರಾಗಿರುವ ನಾಯ್ಡು ಅವರಿಗೆ ಇನ್ನರ್ ರಿಂಗ್ ರೋಡ್ (ಐಆರ್​ಆರ್) ಪ್ರಕರಣ, ಅಬಕಾರಿ ನೀತಿ ಪ್ರಕರಣ ಮತ್ತು ಮರಳು ಗಣಿಗಾರಿಕೆ ಪ್ರಕರಣಗಳಲ್ಲಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ಕಳೆದ ವರ್ಷ ನವೆಂಬರ್‌ನಲ್ಲಿ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ನಾಯ್ಡು ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

    ಕಳೆದ ವರ್ಷ ಸೆಪ್ಟೆಂಬರ್ 9 ರಂದು ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಾಯ್ಡು ಅವರನ್ನು ಬಂಧಿಸಿತ್ತು. ಸೆಪ್ಟೆಂಬರ್ 10 ರಿಂದ ಅಕ್ಟೋಬರ್ 31 ರವರೆಗೆ ರಾಜಮಂಡ್ರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.

    ಈ ಪ್ರಕರಣವು ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದಿಂದ (APSSDC) ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದೆ, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ 300 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಆಪಾದಿಸಲಾಗಿದೆ.

    ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ ಪ್ರತಿಕ್ರಿಯಿಸಿರುವ ನಾಯ್ಡು ಅವರು, ತಾವು ಯಾವುದೇ ತಪ್ಪು ಮಾಡಿಲ್ಲ; ಇದು ಸೇಡಿನ ರಾಜಕೀಯ ಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts