ಧರ್ಮದ ವಿಚಾರ ಭಾಷಣಕ್ಕಷ್ಟೇ ಸೀಮಿತ

sri

ಶಿವಮೊಗ್ಗ: ಪ್ರತಿಯೊಂದು ಧರ್ಮಗಳೂ ಮನುಕುಲಕ್ಕೆ ಹಿತ ಕಾಯುವ ಚಿಂತನೆ ಹೊಂದಿವೆ. ಒಂದೊಂದು ಕಾಲಘಟ್ಟದಲ್ಲಿ ಒಂದೊಂದು ಧರ್ಮಗಳು ಪ್ರವರ್ಧಮಾನಕ್ಕೆ ಬಂದಿವೆ ಎಂದು ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ನಗರದ ಆದಿಚುಂಚನಗಿರಿ ಶಾಖಾ ಮಠದ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಭಗವತ್ ಚಿಂತನ ಧರ್ಮ ಸಂಕಥನ ಉಪನ್ಯಾಸದಲ್ಲಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಎಲ್ಲ ಧರ್ಮಗಳಲ್ಲಿನ ವಿಚಾರಗಳು ಅನುಷ್ಠಾನಕ್ಕಾಗಿ ಇವೆಯೇ ಹೊರತು ಕೇವಲ ಭಾಷಣಕ್ಕಲ್ಲ. ಆದರೆ ಇಂದು ಧರ್ಮದ ವಿಚಾರಗಳು ಹೆಚ್ಚಾಗಿ ಭಾಷಣಕ್ಕಷ್ಟೇ ಸೀಮಿತವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾನವ ಜೀವಿ ವಿಕಾಸ ಹೊಂದಿದ ಆರಂಭದಲ್ಲಿ ಕಾಡಿನಲ್ಲಿ ಪ್ರಾಣಿಗಳ ನಡುವೆ ಮಾನವ ವಾಸಿಸುತ್ತಿದ್ದ. ಬಳಿಕ ಆಹಾರ ಕ್ರಾಂತಿಯಾಯಿತು. ಇದರಿಂದ ಗುಂಪು, ಪ್ರದೇಶ, ಗ್ರಾಮ, ಪಟ್ಟಣ ನಿರ್ಮಾಣವಾಯಿತು. ಇದೆಲ್ಲ ಆದ ಬಳಿಕ ದೇವರು, ಧರ್ಮವನ್ನು ಮನುಷ್ಯ ಹುಡುಕಿಕೊಂಡ. ಇದೇ ಹೆಸರಿನಲ್ಲಿ ಏಕತೆ ಸೃಷ್ಟಿಯಾಯಿತು ಎಂದು ಹೇಳಿದರು.
ಆಹಾರಕ್ಕಾಗಿ ಹೋರಾಟ ಮಾಡುತ್ತಿದ್ದ ಮನುಷ್ಯ ಕ್ರಮೇಣ ಧರ್ಮಕ್ಕಾಗಿ ಹೋರಾಟ ಮಾಡುವ ಸನ್ನಿವೇಶ ಸೃಷ್ಟಿಯಾಯಿತು. ಇಸ್ಲಾಂ ಧರ್ಮ ಶಾಂತಿ ಹಾಗೂ ಶರಣಾಗತಿ ಸಾರುತ್ತದೆ. ಆದರೆ ಇಂದು ಸನ್ನಿವೇಶ ಭಿನ್ನವಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
ಆದಿಚುಂಚನಗಿರಿ ಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಚಿತ್ರದುಗ ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗನಾಥ ಸ್ವಾಮೀಜಿ, ಬಸವಕೇಂದ್ರದ ಶ್ರೀ ಬಸವಮರುಳಸಿದ್ದ ಸ್ವಾಮೀಜಿ, ಗೋಕಾಕ್‌ನ ಶ್ರೀ ರವಿಶಂಕರ ಮಹಾಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು.
ಮನು ಕುಲದ ಪರಿವರ್ತನೆ, ವಿಶ್ವಶಾಂತಿ ಹಾಗೂ ಸೌಹಾರ್ದತೆಯಲ್ಲಿ ಧರ್ಮಗಳ ಪಾತ್ರ ಕುರಿತು ಉಪನ್ಯಾಸ ನಡೆಯಿತು. ಸತ್ಸಂಗ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಆದಿಚುಂಚನಗಿರಿ ಸಂಸ್ಥೆಯ ಹಿರಿಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಶ್ರೀಗಳು ಗೌರವಿಸಿ ಆಶೀರ್ವದಿಸಿದರು.

Share This Article

ಉಡುಗೆಗೆ ಮ್ಯಾಚ್​ ಆಗುವ ಲಿಪ್​ಸ್ಟಿಕ್​​​ ಆಯ್ಕೆ ಮಾಡುವುದೇಗೆ?; ಇಲ್ಲಿದೆ ಸಿಂಪಲ್​ ಟಿಪ್ಸ್​​ | Beauty Tips

ನಾವು ಮದುವೆಗೆ ಚೆಂದದ ಬಟ್ಟೆಗಳನ್ನು ಆಯ್ಕೆ ಮಾಡುತ್ತೇವೆ. ಆದ್ದರಿಂದ ಯಾರೂ ನಮಗಿಂತ ಹೆಚ್ಚು ಸುಂದರವಾಗಿ ಕಾಣುವುದಿಲ್ಲ.…

ಚಳಿಗಾಲದಲ್ಲಿ ವಿಟಮಿನ್​​ ಡಿ ಕೊರತೆಯೇ?; ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ | Health Tips

ಚಳಿಗಾಲದಲ್ಲಿ ಸೂರ್ಯನ ಬೆಳಕಿನ ಕೊರತೆಯಿಂದ ವಿಟಮಿನ್ ಡಿ ಕೊರತೆ ಉಂಟಾಗುತ್ತದೆ. ಆದರೆ ಈ ಪೋಷಕಾಂಶವು ಅನೇಕ…

Mushrooms for Cancer: ಅಣಬೆ ತಿಂದರೆ ಯಾವುದೇ ಕ್ಯಾನ್ಸರ್ ಇದ್ರು ಕಂಟ್ರೋಲ್…!

Mushrooms for Cancer : ಕ್ಯಾನ್ಸರ್ ರೋಗ ಅಪಾಯಕಾರಿ. ಕ್ಯಾನ್ಸರ್ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಕ್ಯಾನ್ಸರ್​​ನಲ್ಲಿ…