ಜಗತ್ತಿನ ಒಳಿತಿಗೆ ಧಾರ್ಮಿಕ ಕೈಂಕರ್ಯ

blank

ಕೋಟ: ಲೋಕಕಲ್ಯಾಣಾರ್ಥ ಶ್ರೀ ನಿವಾಸ ಕಲ್ಯಾಣ ಕಾರ್ಯಕ್ರಮ ಸಂಘಟಕರು ಆಯೋಜಿಸಿದ್ದಾರೆ. ಜಗತ್ತಿನ ಒಳಿತಾಗಿ ಆಗಾಗ ಧಾರ್ಮಿಕ ಕೈಂಕರ್ಯ ನಡೆಯುತ್ತಿರಬೇಕು ಎಂದು ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲ ಮುಖ್ಯಸ್ಥ ಸುಬ್ರಹ್ಮಣ್ಯ ಮಧ್ಯಸ್ಥ ಹೇಳಿದರು.

ಸಾಸ್ತಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಚೇರಿಯಲ್ಲಿ ಏ.1ರಿಂದ 3ರ ವರೆಗೆ ನಡೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.

ಆಮಂತ್ರಣ ಪತ್ರಿಕೆಯನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗು ಅಧ್ಯಕ್ಷ ಗಣೇಶ್ ಭಟ್ ಬಿಡುಗಡೆಗೊಳಿಸಿದರು.

ಉದ್ಯಮಿ ಸುರೇಶ್ ಬೆಟ್ಟಿನ್, ಚಂದ್ರಶೇಖರ್ ಧನ್ಯ, ಅಘೋರೇಶ್ವರ ದೇಗುಲ ಧರ್ಮದರ್ಶಿ ಚಂದ್ರಶೇಖರ್ ಕಾರಂತ್, ಗೋಳಿಗರಡಿ ದೈವಸ್ಥಾನ ಅಧ್ಯಕ್ಷ ಜಿ.ವಿಠ್ಠಲ್ ಪೂಜಾರಿ ಪಾಂಡೇಶ್ವರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ರಮೇಶ್ ಪಿ.ಕೆ., ಸಾಲಿಗ್ರಾಮ ದೇಗುಲ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಸಮಿತಿ ಪ್ರಮುಖರಾದ ಲೀಲಾವತಿ ಗಂಗಾಧರ, ಪ್ರಸನ್ನ ತುಂಗ, ರಘು ಮಧ್ಯಸ್ಥ, ಸುಬ್ರಾಯ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಕಲ್ಯಾಣೋತ್ಸವ ಮಾರ್ಗದರ್ಶಕ ಡಾ.ವಿದ್ವಾನ್ ವಿಜಯ್ ಮಂಜರ್ ಮಾಹಿತಿ ನೀಡಿದರು. ಸಮಿತಿ ಅಧ್ಯಕ್ಷ ಎಂ.ಸಿ.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ವಂದಿಸಿದರು.

blank

ಮರೂರು ದೇವಳ ವಾರ್ಷಿಕ ಪೂಜೆ, ಭಜನೋತ್ಸವ

ಸಮಸ್ಯೆಗಳ ಕೂಪ ಗುಂಡೂರು ಡ್ಯಾಂ

 

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…