More

    ಅಭಿವೃದ್ಧಿಯ ನಾಗಾಲೋಟದಲ್ಲಿ ಕುಸಿದ ಮಾನವೀಯ ಮೌಲ್ಯ

    ಸುತ್ತೂರು ಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬೇಸರ


    ವಿಜಯವಾಣಿ ಸುದ್ದಿಜಾಲ ಆನೇಕಲ್
    ದೇಶ ವೈಜ್ಞಾನಿಕ, ತಾಂತ್ರಿಕವಾಗಿ ನಾಗಲೋಟದಲ್ಲಿ ಬೆಳೆಯುತ್ತಿದೆ. ಆದರೆ, ಮಾನವೀಯ ಮೌಲ್ಯಗಳು ಪಾತಾಳಕ್ಕೆ ಕುಸಿಯುತ್ತಿವೆ. ಉನ್ನತ ವ್ಯಾಸಂಗ ಮಾಡಿ, ಉನ್ನತ ಸ್ಥಾನದಲ್ಲಿದ್ದರೂ ತಂದೆ-ತಾಯಿಗಳ ಆರೈಕೆ ಮಾಡದೆ, ವೃದ್ಧಾಶ್ರಮಗಳಿಗೆ ಸೇರಿಸಲಾಗುತ್ತಿದೆ ಎಂದು ಸುತ್ತೂರು ಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬೇಸರಿಸಿದರು.
    ತಾಲೂಕಿನ ಮಾಸ್ತೇನಹಳ್ಳಿ ಶ್ರೀ ವೀರಭದ್ರಸ್ವಾಮಿ ದೇವಾಲಯದಲ್ಲಿ ರಾಜಗೋಪುರಗಳ ಕಲಶ ಪ್ರತಿಷ್ಠಾಪನೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು. ಮಾಸ್ತೇನಹಳ್ಳಿ ವೀರಭದ್ರಸ್ವಾಮಿ ದೇವಾಲಯವು ಈ ಭಾಗದ ಜನರ ನಂಬಿಕೆಯ ತಾಣವಾಗಿದೆ. ಸಹಸ್ರಾರು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಿರುವ ಮಹಾದೈವವಾಗಿದೆ ಎಂದರು.
    ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ರಾಜಾಪುರ ಸಂಸ್ಥಾನ ಮಠದ ಡಾ.ಶ್ರೀ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ವಿಭೂತಿಪುರ ಸಂಸ್ಥಾನ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಹಾವೇರಿಯ ಶಿಗ್ಗಾಂವಿಯ ಮುರುಗೇಂದ್ರ ಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಅಂಚೆಟ್ಟಿಯ ದೇವೇಗೌಡನದೊಡ್ಡಿ ಮಠದ ಶ್ರೀ ಕರಿಬಸವ ರಾಜೇಂದ್ರ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಹರಿಕಥಾ ವಿದ್ವಾನ್ ಪಟ್ಟಾಚಾರ್ಯ ಸ್ವಾಮೀಜಿ ಹರಿಕಥೆ ಕೀರ್ತನೆ ನಡೆಸಿಕೊಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts