More

  ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ

  ಶಿಗ್ಗಾಂವಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹಲವಾರು ಮಹನೀಯರು ಶ್ರಮಿಸಿದ್ದಾರೆ. ಸಾವಿರಾರು ಜನ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.

  ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ರಾಷ್ಟ್ರಪ್ರೇಮ, ಭಾವೈಕ್ಯ, ದೇಶದ ರಕ್ಷಣೆ, ದೇಶದ ಏಕತೆ ಕಾಪಾಡುವ ಗುಣ ಅಳವಡಿಸಿಕೊಳ್ಳುವ ಮೂಲಕ ನಮ್ಮ ಜವಾಬ್ದಾರಿ ಹೆಚ್ಚಿಸಿಕೊಂಡು ಸ್ವಾತಂತ್ರ್ಯ ಯೋಧರು ಮಾಡಿದ ತ್ಯಾಗ ಸ್ಮರಿಸಬೇಕು ಎಂದರು.

  ಹಿರಿಯ ನಾಗರಿಕರ ಸನ್ಮಾನ ಮತ್ತು ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪಟ್ಟಣದ ವಿವಿಧ ಶಾಲೆಗಳ ಮಕ್ಕಳಿಂದ ದೇಶಭಕ್ತಿ ಗೀತೆಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

  ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ, ನೌಕರರ ಸಂಘದ ತಾಲೂಕು ಅಧ್ಯಕ್ಷ ಅರುಣ ಹುಡೇದಗೌಡ್ರ, ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಶ್ರೀಕಾಂತ ಬುಳ್ಳಕ್ಕನವರ, ಸುಭಾಸ ಚವ್ಹಾಣ, ತಿಪ್ಪಣ್ಣ ಸಾತಣ್ಣನವರ, ಕರೆಪ್ಪ ಕಟ್ಟಿಮನಿ, ರೂಪಾ ಬನ್ನಿಕ್ಕೊಪ್ಪ, ಸಂಗೀತಾ ವಾಲ್ಮೀಕಿ, ಶೇಖವ್ವ ಶಿಗ್ಗಾವಿ, ರೇಖಾ ಕಂಕಣವಾಡ, ಜ್ಯೋತಿ ನಡೂರ, ಅನುರಾಧ ಮಾಳವದೆ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts