More

    ಕರೊನಾ ಲಸಿಕಾ ಪ್ರಮಾಣಪತ್ರದಿಂದ ಪ್ರಧಾನಿ ಫೋಟೋ ತೆಗೆಯಿರಿ: ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆ

    ನವದೆಹಲಿ: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗುವ ಒಂದು ವಾರಕ್ಕೂ ಮುಂಚೆಯೇ ಕರೊನಾ ಲಸಿಕೆ ಪ್ರಮಾಣ ಪತ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತೆಗೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಕೇಳಿದೆ.

    ಚುನಾವಣಾ ಘೋಷಣೆಯಾಗಿರುವ ರಾಜ್ಯಗಳಲ್ಲಿ ಈಗಾಗಲೇ ನೀತಿಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಫೋಟೋ ಇರುವುದು ಕೂಡ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ತಕ್ಷಣ ಅದನ್ನು ತೆಗೆಯಿರಿ ಎಂದು ಕೇಂದ್ರ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿರಿ: ಭಾರತದಲ್ಲಿ ಪ್ರತಿ ವ್ಯಕ್ತಿ ಒಂದು ವರ್ಷಕ್ಕೆ ಪೋಲು ಮಾಡುವ ಆಹಾರ ಪ್ರಮಾಣ ಎಷ್ಟು ಗೊತ್ತಾ?

    ಪ್ರಧಾನಿ ಮೋದಿ ಅವರು ಅಧಿಕೃತ ಯಂತ್ರ ಕಾರ್ಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಾರದ ಆರಂಭದಲ್ಲಿ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

    ಕರೊನಾ ಲಸಿಕೆ ಪ್ರಮಾಣ ಪತ್ರದಲ್ಲಿನ ಪ್ರಧಾನಿ ಮೋದಿ ಫೋಟೋ ಬಗ್ಗೆ ಮೊದಲೇ ಧ್ವನಿ ಎತ್ತಿದ್ದು ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಗಳು. ಫೋಟೋ ತೆಗೆಯುವಂತೆ ಕೇಂದ್ರೆ ಆರೋಗ್ಯ ಸಚಿವಾಲಯವನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಸರ್ಕಾರ ಮೋದಿ ಫೋಟೋ ಕಾಣದಂತೆ ಮಾಡುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿತ್ತು.

    ಆದಾಗ್ಯು ಪ್ರಧಾನಿ ಫೋಟೋ ಪಶ್ಚಿಮ ಬಂಗಾಳ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ಬಳಕೆಯಲ್ಲಿದೆ. ಸೋಮವಾರ ಎರಡನೇ ಹಂತ ಲಸಿಕಾ ಅಭಿಯಾನ ಆರಂಭವಾಗಿದೆ. ಹೀಗಾಗಿ ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಧಾನಿ ಫೋಟೋ ಬಳಕೆ ವಿರುದ್ಧ ಆಕ್ರೋಶ ಕೇಳಿಬಂದಿದ್ದು, ವೈದ್ಯರು, ನರ್ಸ್​ಗಳು ಮತ್ತು ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಕಸಿಯಲಾಗುತ್ತಿದೆ. ಅವರಿಗೆ ಬರಬೇಕಾದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಆರೋಪಿಸಿದೆ.

    ಇದನ್ನೂ ಓದಿರಿ: ಮಂಗಳೂರಲ್ಲಿ ಮರುಕಳಿಸಿದ ರ‌್ಯಾಗಿಂಗ್, ಎರಡು ಕಾಲೇಜುಗಳ 7 ವಿದ್ಯಾರ್ಥಿಗಳ ಬಂಧಿಸಿದ ಪೊಲೀಸರು

    ಹೀಗಾಗಿ ಚುನಾವಣಾ ಆಯೋಗ ಕೂಡಲೇ ಫೋಟೋ ತೆಗೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಂದಹಾಗೆ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆ ಕೆಲವೇ ವಾರಗಳಲ್ಲಿ ಆರಂಭವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಮಾರ್ಚ್​ 27ರಿಂದ ಏಪ್ರಿಲ್​ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22 ಮತ್ತು ಏಪ್ರಿಲ್ 29ರವರೆಗೆ 8 ಹಂತಗಳಲ್ಲಿ ಮತದಾನ ನಡೆಯಲಿದೆ.

    ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಒಂದೇ ಸುತ್ತಿನಲ್ಲಿ ಏಪ್ರಿಲ್​ 6ರಂದು ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಮಾರ್ಚ್​ 27, ಏಪ್ರಿಲ್​ 1 ಮತ್ತು ಏಪ್ರಿಲ್ 6ರಂದು ಮತದಾನ ನಡೆಯಲಿದೆ. (ಏಜೆನ್ಸೀಸ್​)

    ಕನ್ನಡ ಸಾಹಿತ್ಯ ಲೋಕದ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ

    ಮನೆಯಲ್ಲೇ ಕುಳಿತು ಆರಾಮಾಗಿ ಹಣ ಗಳಿಸುವ ಆಸೆ ಇದ್ರೆ ಈ ಸ್ಟೋರಿಯನ್ನೊಮ್ಮೆ ಓದಿ..!

    ನೂತನ ಪಿಂಚಣಿ ವ್ಯವಸ್ಥೆ ರದ್ದು: ವ್ಯವಸ್ಥೆ ಬದಲು ಚರ್ಚೆಗೆ ಸಭೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts