More

    ದಾವಣಗೆರೆಯಲ್ಲಿ ಗಂಡಸರು ಯಾರು ಇಲ್ಲ ಎಂದು ಬಿಂಬಿಸಿದ್ದಾರೆ: ಎಂ.ಪಿ. ರೇಣುಕಾಚಾರ್ಯ

    ದಾವಣಗೆರೆ: ಬುಧವಾರ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಹಾಲಿ ಸಂಸದರಿಗೆ ಕೊಕ್​ ನೀಡಲಾಗಿದ್ದು, ಅದರಂತೆ ದಾವಣಗೆರೆ ಕ್ಷೇತ್ರದ ಹಾಲಿ ಸಂಸದ ಜಿ.ಎಂ. ಸಿದ್ಧೇಶ್ವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

    ಆದರೆ, ಸಿದ್ದೇಶ್ವರ ಬದಲಿಗೆ ಅವರ ಪತ್ನಿಗೆ ಟಿಕೆಟ್​ ನೀಡಿರುವುದು ಆಕಾಂಕ್ಷಿಗಳ ಕಣ್ಣು ಕೆಂಪಗಾಗಿಸಿದ್ದು, ಬಹಿರಂಗವಾಗಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರಂತೆ ಈಗ ಮಾಜಿ ಸಚಿವ ರೇಣುಕಾಚಾರ್ಯ ಈ ಬಗ್ಗೆ ಮಾತನಾಡಿದ್ದು, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಮಾತನಾಡಿ ರೇಣುಕಾಚಾರ್ಯ ದಾವಣಗೆರೆ ಜಿಲ್ಲೆಯಲ್ಲಿ ಸಿದ್ದೇಶ್ವರ ಅವರು ಸಂಘಟನೆ ನೀಡಿರುವ ಕೊಡುಗೆ ಶೂನ್ಯ, ಅಭಿವೃದ್ಧಿಯೂ ಶೂನ್ಯ. ಎಲ್ಲವನ್ನೂ ಸ್ವಂತಕ್ಕೋಸ್ಕರ ಮಾಡಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಅವರೇ ಕಾರಣ. ಯಾವ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಿಲ್ಲ. ಎಲ್ಲಿಯೂ ಬಿರುಸಿನ ಪ್ರಚಾರ ಮಾಡಿಲ್ಲ. ಕೇವಲ ನಾಲ್ಕರಿಂದ ಐದು ತಾಸು ಅಷ್ಟೇ ಪ್ರಚಾರ ನಡೆಸಿದ್ದಾರೆ. ನಾವೆಲ್ಲರೂ ಸೋಲಲು ಸಿದ್ದೇಶ್ವರ ಅವರೇ ಕಾರಣ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಮತ್ತೊಂದು ಶಾಕ್; ಬಿಜೆಪಿ ಸೇರ್ಪಡೆಯಾದ ಮಾಜಿ ಅಥ್ಲೀಟ್

    ಸಿದ್ದೇಶ್ವರ ಅವರ ಕುಟುಂಬ ಯಾವಾಗ ಬಿಜೆಪಿ ಬಾವುಟ ಕಟ್ಟಿದೆ, ಯಾವಾಗ ಧ್ವಜ ಕಟ್ಟಿದೆ. ಬಿಜೆಪಿ ಪಕ್ಷಕ್ಕೆ ನೀಡಿರುವ ಕೊಡುಗೆ ಶೂನ್ಯ. ಚಿತ್ರದುರ್ಗ-ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿದ್ದು ಎಸ್.ಎ.ರವೀಂದ್ರನಾಥ್ ನೇತೃತ್ವದ ತಂಡ. ನಾವೆಲ್ಲರೂ ಸೇರಿ ಪಕ್ಷ ಬಲಿಷ್ಠಗೊಳಿಸಿದ್ದೇವೆ. ಸಿದ್ದೇಶ್ವರ ಏನೂ ಬಿಜೆಪಿ ಕಟ್ಟಿ ಬೆಳೆಸಿದ್ದೀರಾ, ಹೋರಾಟ ಮಾಡಿದ್ದಾರಾ.

    ನಾವು ಹೊಸ ಮುಖಗಳಿಗೆ ಮಣೆ ಹಾಕಿ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಂದು ಹೈಕಮಾಂಡ್​ ಬಳಿ ಮನವಿ ಮಾಡಿದ್ದೆವು. ನಮ್ಮ ಹೋರಾಟ ಕಾಂಗ್ರೆಸ್​ ವಿರುದ್ಧವೇ ಹೊರತು ವ್ಯಕ್ತಿಯ ವಿರುದ್ಧ ಅಲ್ಲ. ದಾವಣಗೆರೆ ಜಿಲ್ಲೆ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ರಾಷ್ಟ್ರೀಯ ನಾಯಕರಿಗೆ ತಪ್ಪು ಮಾಹಿತಿ ರವಾನೆಯಾಗಿದ್ದು, ಈ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

    ಈಗ ಘೋಷಿಸಿರುವ ಅಭ್ಯರ್ಥಿಗೆ ನಮ್ಮ ಬೆಂಬಲ ಇಲ್ಲ. ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದೇವೆ, ಯಾರಿಗೂ ನೀಡಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ದೆಹಲಿ ಪ್ರಮುಖ ನಾಯಕರು ಸೇರಿದಂತೆ ಎಲ್ಲರನ್ನೂ ಭೇಟಿ ಮಾಡಿ ಮನವಿ ಮಾಡಿದ್ದರೂ, ಸಿದ್ದೇಶ್ವರರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಮತ್ತೆ ಸಭೆ ಸೇರಿ ಪಕ್ಷೇತರರಾಗಿ ಕಣಕ್ಕಿಳಿಯಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಹತ್ತು ಸಾವಿರ ಜನರನ್ನು ಸೇರಿಸಿ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಗುಡುಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts