ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದಿಂದ ಮಾ.೧೨ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಯುಗಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಶರಣಭೂಪಾಲ ನಾಡಗೌಡ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿಬ ಮಾತನಾಡಿ, ಅಂದು ಬೆಳಿಗ್ಗೆ ೮ ಗಂಟೆಗೆ
ಮAಗಳವಾರಪೇಟೆ ಹಿರೆಮಠದಿಂದ ರೇಣುಕಾಚಾರ್ಯ ವೃತ್ತದವರೆಗೂ ಬೈಕ್ ರ‍್ಯಾಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವೀರಶೈವ ಕಲ್ಯಾಣ ಮಂಟಪದವರೆಗೆ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ನAತರ ವೀರಶೈವ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ
ಸಚಿವರು, ಶಾಸಕರು, ಸಂಸದರು, ಜಿಲ್ಲಾ ವೀರಶೈವ ಲಿಂಗಾಯತ ಸಮಾಜ, ಅಖಿಲ ಭಾರತ ವೀರಸೈವ ಮಹಾಸಭಾ, ತಾಲೂಕು ಬೇಡ ಜಂಗಮ ಸಂಘ ಸೇರಿದಂತೆ ವಿವಿಧ ಸಂಘದ ಪದಾಽಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಗದ್ಗುರು ರೇಣುಕಾಚಾರ್ಯರ ಕುರಿತು ಗಿಣಿವರ ಹಿರೆಮಠದ ಶಿವಾಚಾರ್ಯ ಶಾಸಿö ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಽಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಽಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಇತರೆ ಅಽಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಶ್ರೀ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ, ಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪೂರ, ಪ್ರಮುಖರಾದ ಶಿವಾನಂದ ಚುಕ್ಕಿ, ವೀರಯ್ಯ ಸ್ವಾಮಿ ಹಿರೆಮಠ, ಪ್ರಭುಸಾಸಿö, ಶರಣಯ್ಯ ಸ್ವಾಮಿ ಸುರಭಿ ಇದ್ದರು.