More

    ಪರಂಪರೆ ಮರೆತರೆ ಸಂಸ್ಕೃತಿ ಉಳಿಯಲ್ಲ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅಭಿಮತ

    ಮಂಡ್ಯ: ನಾಡಿನ ಪರಂಪರೆ ಮರೆತರೆ ಸಂಸ್ಕೃತಿ ಉಳಿಯುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.
    ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಸಹಯೋಗದಲ್ಲಿ ಆಯೋಜಿಸಿದ್ದ ಜಗದ್ಗುರು ರೇಣುಕಾಚಾರ್ಯ ಯುಗಮಾನೋತ್ಸವ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಆಧುನಿಕತೆ ಹೆಸರಿನಲ್ಲಿ ಪುರಾಣ, ಪರಂಪರೆಯನ್ನು ಮರೆಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಪುರಾಣ ಪ್ರಸಿದ್ಧರನ್ನು ಸ್ಮರಿಸಿಕೊಂಡು ಅವರ ಆಚಾರ, ವಿಚಾರ, ತತ್ವಗಳನ್ನು ಅಳವಡಿಸಿಕೊಂಡರೆ ನಾವು ಉತ್ತಮವಾದ ಸ್ವಾಸ್ಥ ಸಮಾಜವನ್ನು ಕಟ್ಟುವುದಕ್ಕೆ ಅನುಕೂಲವಾಗುತ್ತದೆ. ಸಮಾಜದಲ್ಲಿನ ಮಹಾಪುರುಷರು ಶಾಂತಿಯನ್ನು ಪಾಲಿಸುವುದರ ಜತೆಗೆ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಬೋಧನೆ ಮಾಡಿ ಉತ್ತಮ ಸಮಾಜ ಕಟ್ಟುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದರು ಎಂದರು.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ರೇಣುಕಾಚಾರ್ಯರು ಸಾವಿರಾರು ವರ್ಷಗಳ ಹಿಂದೆ ವೀರಶೈವ ಧರ್ಮ ಸ್ಥಾಪನೆ ಮಾಡಿ ಸಮಾಜದಲ್ಲಿ ಮನುಷ್ಯ-ಮನುಷ್ಯರ ನಡುವೆ ತಾರತಮ್ಯ ಹೋಗಲಾಡಿಸಿ ಮಾನವ ಧರ್ಮವನ್ನು ಎತ್ತಿ ಹಿಡಿದರು ಎಂದರು.
    ಚಂದ್ರವನ ಆಶ್ರಮದ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಬಿ.ಜಿ ಪುರ ಹೊರಮಠದ ಚಂದ್ರಶೇಖರ ಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಕದಂಬ ಜಂಗಮ ಮಠದ ರೇಣುಕಾಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ, ಕನ್ನಡ ಮತ್ತು ಸಂಸ್ಕೃತಿಯ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts