ರಾಜ್ಯ ಸರ್ಕಾರದ ವಿರುದ್ಧ ರೇಣುಕಾಚಾರ್ಯ ಆಕ್ರೋಶ

blank

ಚಿತ್ರದುರ್ಗ: ಮೀಸಲಾತಿ ಬೇಡಿಕೆ ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಮಂಗಳವಾರ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರು ಲಾಠಿ ಜಾರ್ಜ್ ನಡೆಸಿದ್ದನ್ನು ಮಾಜಿ ಸಚಿವ ಎಂ.ಪಿ. ರೇಣುಕಾಚಾರ‌್ಯ ಖಂಡಿಸಿದ್ದಾರೆ. ನಗರದಲ್ಲಿ ಮಂಗಳವಾರ ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದು ವಿರೋಧಿ ಕಾಂಗ್ರೆಸ್ ಸರ್ಕಾರ ಅಮಾಯಕರ ಮೇಲೆ ಲಾಠಿಜಾರ್ಜ್ ಮಾಡಿಸಿದೆ. ಈ ಸರ್ಕಾರಕ್ಕೆ ರಾಮ, ಹನುಮಂತ ಹಾಗೂ ಕೇಸರಿಯನ್ನು ಕಂಡರೆ ಆಗುವುದಿಲ್ಲ. ಲಾಠಿ ಜಾರ್ಜ್ ನಡೆದಿರುವುದಕ್ಕೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಹಿಂದು, ರೈತ, ಮಹಿಳಾ ವಿರೋಧಿ ಸರ್ಕಾರ ತೊಲಗಬೇಕು ಎಂದ ಅವರು, ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಕರೆಸಿ ಮಾತನಾಡುವ ಬದಲು ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ ಎಂದರು.
ಧರಣಿ ನಿರತ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡಿದ್ದಾರೆ ಎಂದರು.

blank
Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…