More

    ರೇಣುಕಾಚಾರ್ಯರ ತತ್ವ, ಸಿದ್ಧಾಂತ ಇಂದಿಗೂ ಪ್ರಸ್ತುತ

    ತರೀಕೆರೆ: ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡ ಚಿತ್ರ ಶೇಖರಪ್ಪ ಹೇಳಿದರು.
    ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಶ್ರೀ ರೇಣುಕಾರ್ಚಾಯರ ಜಯಂತಿ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
    ವೀರಶೈವ ಧರ್ಮದ ಸಂಸ್ಥಾಪಕರಾಗಿ ಸಮಾನತೆ ಸಾರುವ ಜತೆಗೆ ಧರ್ಮ ಸಂದೇಶದ ಮೂಲಕ ಸಮಾಜದ ಸ್ವಾಸ್ಥೃ ಕಾಪಾಡಲು ಮೇಲ್ಪಂಕ್ತಿ ಹಾಕಿದವರಲ್ಲಿ ಶ್ರೀ ರೇಣುಕಾಚಾರ್ಯರು ಪ್ರಮುಖರು. ಅವರು ಸಾಗಿದ ಹಾದಿಯಲ್ಲಿ ಎಲ್ಲರೂ ನಡೆಯಬೇಕು. ಅವರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿ ಸಮ ಸಮಾಜದ ನಿರ್ಮಾತೃಗಳಾಗಬೇಕು ಎಂದರು.
    ಮುಖಂಡ ಎಚ್.ಆರ್.ಸೋಮಶೇಖರಯ್ಯ ಮಾತನಾಡಿ, ಮಾನವ ಧರ್ಮಕ್ಕೆ ಜಯವಾಗಲಿ ಎಂದು ಪ್ರತಿಪಾದಿಸಿದ್ದ ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಣೆಗೊಳ್ಳಲು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಉಪಸ್ಥಿತಿ ಅನಿವಾರ್ಯವಿತ್ತು. ಆದರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅನುಪಸ್ಥಿತಿ ಸರ್ಕಾರಿ ಕಾರ್ಯಕ್ರಮ ಅನರ್ಥಗೊಳ್ಳುವಂತೆ ಮಾಡಿದೆ. ಸರ್ಕಾರಿ ಕಾರ್ಯಕ್ರಮಕ್ಕೆ ಗೈರಾಗುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ತಹಸೀಲ್ದಾರ್ ವಿ.ಎಸ್.ರಾಜೀವ್, ಬಿಇಒ ಟಿ.ಗೋವಿಂದಪ್ಪ, ಗ್ರೇಡ್-2 ತಹಸೀಲ್ದಾರ್ ಲಕ್ಷ್ಮೀದೇವಿ, ಸಮಾಜದ ಪ್ರಮುಖರಾದ ರಾಜಶೇಖರ್, ನವೀನ್, ಬಾಬು, ರವಿ, ಶಶಿಕುಮಾರ್, ಹಾ.ಮ.ರಾಜಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts