ಪವಿತ್ರಾಗೌಡಗೆ  ಮತ್ತೊಂದು ಸಂಕಷ್ಟ; ಆಕೆ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ

Pavithra gowda

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಹಿಸಿದ್ದಾನೆ ಎಂದು ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪದಲ್ಲಿ ದರ್ಶನ್​ ಹಾಗೂ ಪವಿತ್ರಾ ಗೌಡ ಗ್ಯಾಂಗ್​​ ಜೈಲಿನಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪವಿತ್ರಾಗೌಡಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ.

ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ. ಪಟ್ಟಣಗೆರೆ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ.

ಫ್ಯಾಷನ್ ಡಿಸೈನರ್ ಆಗಿರುವ ಪವಿತ್ರಾ ಗೌಡ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಜರಾಜೇಶ್ವರಿ ನಗರದ ನಿವಾಸದ ಬಳಿ ಇರುವ ರೆಡ್‌ ಕಾರ್ಪೆಟ್‌ 777 ಶಾಪ್ ಅನ್ನು ಖುಷಿ ಗೌಡ ನಡೆಸುತ್ತಿದ್ದಾರೆ. ಸೆಲೆಬ್ರಿಟಿಗಳಿಗೆ ಭಿನ್ನ ವಿಭಿನ್ನವಾಗಿ ಉಡುಪು ವಿನ್ಯಾಸ ಮಾಡುತ್ತಿರುವ ಈ ರೆಡ್‌ ಕಾರ್ಪೆಟ್‌ ಸಂಸ್ಥೆಯನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿ ಖುಷಿ ಗೌಡ ಮೇಲಿದೆ. ಇನ್ನು ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರನ್ನು ಕಾಣಲು ಮಗಳು ಖುಷಿ ತಮ್ಮ ಅಜ್ಜಿಯೊಂದಿಗೆ ಆಗಾಗ ಜೈಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ.

Share This Article

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

30 ದಿನಗಳಲ್ಲೇ ಸ್ಲಿಮ್ ಆ್ಯಂಡ್​ ಫಿಟ್​ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…