ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರಬಂದ ಬೆನ್ನಲ್ಲೇ ನಟ ದರ್ಶನ್​ಗೆ ಬಿಗ್​ ಶಾಕ್​! Actor Darshan

Actor Darshan

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್​ಗೆ ಹೈಕೋರ್ಟ್​ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ನಿನ್ನೆಯಷ್ಟೇ (ಅ. 30) ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಹೊರಬಂದಿರುವ ದರ್ಶನ್​ಗೆ ಇದೀಗ ಬಿಗ್​ ಶಾಕ್​ ಎದುರಾಗಿದೆ.

ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂಕೊರ್ಟ್​ ಮೆಟ್ಟಿಲೇರಲು ಪ್ರಕರಣದ ತನಿಖಾಧಿಕಾರಿಗಳು ನಿರ್ಧಾರ ಮಾಡಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಬೆಂಗಳೂರು ಪೊಲೀಸರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕೋರ್ಟ್​ ಆದೇಶದ ಪೂರ್ಣ ಪ್ರತಿಗೆ ಬೆಂಗಳೂರು ಪೊಲೀಸರು ಕಾಯುತ್ತಿದ್ದಾರೆ. ದೀಪಾವಳಿ ರಜೆ ಹಿನ್ನೆಲೆಯಲ್ಲಿ ಆದೇಶದ ಪೂರ್ಣ ಪ್ರತಿ ಇನ್ನೂ ಸಿಕ್ಕಿಲ್ಲ. ಸೋಮವಾರ ಆದೇಶ ಪ್ರತಿ ಸಿಗುತ್ತಿದ್ದಂತೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿ, ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆದು ಸುಪ್ರೀಂಕೋರ್ಟ್​ ಮೆಟ್ಟಿಲೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಸುಪ್ರೀಂಕೋರ್ಟ್​ ಮೆಟ್ಟಿಲೇರಿದರೆ, ಬಿಡುಗಡೆಯಾದ ಸಂತೋಷದಲ್ಲಿರುವ ನಟ ದರ್ಶನ್​ಗೆ ಮತ್ತೊಂದು ತಲೆನೋವು ಕಾಡಲಿದೆ.

ನಿನ್ನೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿರುವ​ ನಟ ದರ್ಶನ್​, ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್​ ಜತೆ ಸಮಯ ಕಳೆಯುತ್ತಿದ್ದಾರೆ. ಕುಟುಂಬದ ಜತೆ ದೀಪಾವಳಿ ಆಚರಿಸಲಿದ್ದಾರೆ. ಇಂದು ಅಥವಾ ನಾಳೆ ವೈದ್ಯರನ್ನು ಸಂಪರ್ಕಿಸಿ, ಬೆನ್ನುನೋವಿಗೆ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ.

6 ವಾರಗಳ ಕಾಲ ಮಧ್ಯಂತರ ಜಾಮೀನು

ಅನಾರೋಗ್ಯದ ಆಧಾರದ ಮೇಲೆ ನಟ ದರ್ಶನ್​ ಅವರಿಗೆ ಹೈಕೋರ್ಟ್​ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. 131 ದಿನಗಳ ಬಳಿಕ ದರ್ಶನ್​ ಜೈಲಿನಿಂದ ಹೊರಬಂದಿದ್ದಾರೆ. ನಾನು ತೀವ್ರ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಈ ಹಿನ್ನೆಲೆ ಮಧ್ಯಂತರ ಜಾಮೀನು ನೀಡಿ ಎಂದು ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. ಅ.29ರಂದು ನಟ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್​ ಅವರು ಮಂಡಿಸಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರ ಏಕಸದಸ್ಯ ಪೀಠ ನಿನ್ನೆ (ಅ.30) ತೀರ್ಪು ಪ್ರಕಟಿಸಿತು. ಈ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ನಟ ದರ್ಶನ್​ ತಮಗಿರುವ ಆರೋಗ್ಯ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಒಂದು ವಾರದಲ್ಲಿ ದರ್ಶನ್​ ಚಿಕಿತ್ಸೆಯ ವಿವರವನ್ನು ಸಹ ಕೋರ್ಟ್​ ಸಲ್ಲಿಸಬೇಕಿದೆ. ಇನ್ನು ದರ್ಶನ್​ ಪಾಸ್​ಪೋರ್ಟ್​ ಅನ್ನು ಕೂಡ ಕೋರ್ಟ್​ ವಶಕ್ಕೆ ನೀಡಬೇಕಿದೆ. ಪಾಸ್​ಪೋರ್ಟ್​ ವಶಕ್ಕೆ ನೀಡಲು ಸರ್ಕಾರ ಪರ ವಕೀಲ ಪ್ರಸನ್ನ ಕುಮಾರ್​ ಆಗ್ರಹಿಸಿದ್ದರು. ಇನ್ನು ದರ್ಶನ್​ ಬಯಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಈತನೇ ಈ ಬಾರಿಯ ಅತ್ಯಂತ ದುಬಾರಿ ಆಟಗಾರ… ಹತ್ತು ಐಪಿಎಲ್​ ತಂಡಗಳ ರಿಟೇನ್​ ಪಟ್ಟಿ ಹೀಗಿದೆ… IPL Retention List

ದರ್ಶನ್​ ಪರ ಸಿ.ವಿ ನಾಗೇಶ್​ ಮಂಡಿಸಿದ ವಾದ

ಅರ್ಜಿದಾರರ ದೇಹದಲ್ಲಿ ಸಮರ್ಪಕವಾಗಿ ರಕ್ತಪರಿಚಲನೆ ಆಗುತ್ತಿಲ್ಲ, ಪಾದಗಳಲ್ಲಿ ನಂಬ್ ನೆಸ್ (ಮರಗಟ್ಟುವಿಕೆ) ಇದೆ. ಡಿಸ್ಕ್ ಸಮಸ್ಯೆ ಇದೆ. ಕಾಲಿನಲ್ಲಿ ನರದ ತೊಂದರೆ ಉಂಟಾಗಿದ್ದು, ಈಗಾಗಲೇ ಸ್ವಲ್ಪ ಮಟ್ಟಿಗೆ ಪಾದ ಸ್ಪರ್ಶ ಕಳೆದುಕೊಂಡಿದ್ದಾರೆ. ಹೀಗಿರುವಾಗ ಸೂಕ್ತ ಚಿಕಿತ್ಸೆ ‌ನೀಡುವಲ್ಲಿ ವಿಫಲವಾದರೆ, ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ಎಡಮಾಡಿಕೊಡಬಹುದು. ವೈದ್ಯಕೀಯ ವರದಿಯಲ್ಲಿಯೂ ದರ್ಶನ್​ ಅವರು ಪಾರ್ಶ್ವವಾಯು ತುತ್ತಾಗುವ ಸಾಧ್ಯತೆ ಅಧಿಕವಾಗಿದ್ದು, ತುರ್ತು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕು ಎಂದಿದೆ. ಇವೆಲ್ಲವನ್ನೂ ಗಮನಿಸಿ ಮಧ್ಯಂತರ ಜಾಮೀ‌ನು‌ ನೀಡಬೇಕು ಎಂದು ಮನವಿ ಮಾಡಿದರು.

ಸರ್ಕಾರದ ಪರ ವಕೀಲ ಪ್ರಸನ್ನ ಕುಮಾರ್ ವಾದ

ವೈದ್ಯಕೀಯ ವರದಿಯಲ್ಲಿ ಪಾರ್ಶ್ವವಾಯು ತುತ್ತಾಗುತ್ತಾರೆ ಎಂದಿಲ್ಲ, ತುತ್ತಾಗಬಹುದು ಎಂದು ವೈದ್ಯರು ಅಂದಾಜಿಸಿದ್ದಾರಷ್ಟೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಪೀಠ ನಿಮ್ಮ ಮಾತಿನ ಅರ್ಥವೇನು? ಅರ್ಜಿದಾರರು ಅನಾರೋಗ್ಯದ ಅಂತಿಮ‌ ಹಂತಕ್ಕೆ ತಲುಪುವರೆಗೆ ಕಾಯಬೇಕು ಎನ್ನುವುದೇ ಎಂದು ಪ್ರಶ್ನಿಸಿತು. ತದನಂತರ ಸರ್ಕಾರಿ ಪರ ವಕೀಲರನ್ನು ಉದ್ದೇಶಿಸಿ ನೋಡಿ ಆರೋಗ್ಯ ಎಂಬುವುದು ಮಾನವನ ಮೂಲಭೂತ ಹಕ್ಕು‌‌. ವ್ಯಕ್ತಿ ಆರೋಪಿಯಾಗಿರಲಿ, ಅಪರಾಧಿಯಾಗಿರಲಿ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಈ ರೀತಿ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ, ಇದನ್ನು ಸುಪ್ರೀಂಕೋರ್ಟ್ ಸಹ ಹಲವು ವೇಳೆ‌ ಪುನುರುಚ್ಚರಿಸಿದೆ ಎಂದಿತು.

ವಾದ-‌ಪತ್ರಿವಾದ ಆಲಿಸಿದ ನ್ಯಾಯಪೀಠ ಅರ್ಜಿಯ ತೀರ್ಪನ್ನು ಇಂದಿಗೆ ಪ್ರಕಟಿಸುವುದಾಗಿ ಹೇಳಿತ್ತು. ನಿನ್ನೆ ಬೆಳಗ್ಗೆ ತೀರ್ಪು ಪ್ರಕಟಿಸಿದ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ನಟ ದರ್ಶನ್​ಗೆ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀಯ ಇನ್​ಸ್ಟಾ ಪೋಸ್ಟ್​ ವೈರಲ್!​ Actor Darshan

ನಟ ದರ್ಶನ್​ ಬಾಳಲ್ಲಿ ದೀಪಾವಳಿ ಬೆಳಕು: 6 ವಾರ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ | Actor Darshan

Share This Article

Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?

Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…

2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money

Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…