More

  ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್

  ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಪೊಲೀಸರು ದರ್ಶನ್‌, ಪವಿತ್ರಾಗೌಡ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.

  ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂಗೆ ಅಖಿಲ ಕರ್ನಾಟಕ ತೂಗುದೀಪ ಸೇನಾ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಘು ದರ್ಶನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕಳುಹಿಸಲು ದರ್ಶನ್‌ ಅವರು ರಘು ದರ್ಶನ್‌ ಅವರ ನೆರವು ಪಡೆದಿದ್ದರು ಎನ್ನಲಾಗಿದೆ. ಕೊಲೆ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದ ಸಂಚಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts