ರೇಣುಕಸ್ವಾಮಿ ಹತ್ಯೆ ಕೇಸ್​ನಲ್ಲಿ ಚಿಕ್ಕಣ್ಣನಿಗೂ ಢವಢವ ಶುರು; ಈ ನಟನಿಗೂ ನೋಟಿಸ್ ಕೊಡಲಿದ್ದಾರಂತೆ ಪೊಲೀಸರು

Darshan Chikkanna

ಬೆಂಗಳೂರು: ದೇಶಾದ್ಯಂತ ಸಾಕಷ್ಟು ಚರ್ಚೆ ಹುಟ್ಟು ಹಾಕಿರುವ ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದಿನ ಕಳೆದಂತೆ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣನಿಗೆ ಪೊಲೀಸರು ನೋಟಿಸ್​ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

blank

ಘಟನೆ ನಡೆದ ದಿನ (ಜೂನ್​ 08) ನಟ ದರ್ಶನ್​ ಪ್ರಕರಣದ ಮತ್ತೋರ್ವ ಆರೋಪಿಯಾದ ವಿನಯ್​ ಮಾಲೀಕತ್ವದ ಸ್ಟೋನಿ ಬ್ರೂಕ್​ ರೆಸ್ಟೋ ಬಾರ್​ನಲ್ಲಿ ಪಾರ್ಟಿ ಮಾಡಿದ್ದರು ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಸೇರಿದಂತೆ ಕೆಲವರು ಭಾಗಿಯಾಗಿದ್ದರು. ಬಳಿಕ ಕೆಲಸ ಇರುವುದಾಗಿ ಹೇಳಿ ನಟ ದರ್ಶನ್​ ಅಲ್ಲಿಂದ ಹೊರಟಿದ್ದರಂತೆ. ರೇಣುಕಸ್ವಾಮಿ ಹತ್ಯೆ ನಡೆದ ದಿನವೇ ಪಾರ್ಟಿ ಮಾಡಿದ್ದರಿಂದ ಈ ಬಗ್ಗೆ ವಿಚಾರಿಸಲು ನೋಟಿಸ್​ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕೊಲೆ ವಿಚಾರವಾಗಿ ಪಾರ್ಟಿಯಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ.

Darshan Chikkanna
Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank