ರೇಣುಕಾಸ್ವಾಮಿ ಕೊಲೆ ಪ್ರಕರಣ​; ಮೇ.14ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​ | Murder case​

dk - 2025-04-22T154002.032
Published on

RenukaSwamy Murder case​: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್​ ಸೇರಿ 5 ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ (ಜಾಮೀನು ರದ್ದು ಕೋರಿ) ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾಣೆ ನಡೆಸಿದ ಸುಪ್ರೀಂಕೋರ್ಟ್​ ಮೇ.14ಕ್ಕೆ ವಿಚಾರಣೆ ಮುಂದೂಡಿದೆ.

ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ವಕೀಲರ ವಾದ ಅಲಿಸಿದ ಕೋರ್ಟ್ ವಿಚಾರಣೆಯನ್ನು​ 21 ದಿನಗಳು ಕಾಲ ಮುಂದೂಡಿದೆ.

ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಹಾಗೂ ಆರೋಪಿ ದರ್ಶನ್​ ಪರ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡಿಸಿದರು.

ಕೊಲೆ ಕೇಸ್​ನ ಆರೋಪಿಗಳಾದ ನಟ ದರ್ಶನ್​, ಪವಿತ್ರಗೌಡ, ಪ್ರದೂಶ್​, ಲಕ್ಷ್ಮಣ್​, ನಾಗರಾಜು ಹಾಗೂ ಅನುಕುಮಾರ್ ಸೇರಿದಂತೆ 5 ಪ್ರಮುಖ ಆರೋಪಿಗಳಿಗೆ ಕಳೆದ(2024) ಡಿಸೆಂಬರ್​ 13 ರಂದು ಕರ್ನಾಟಕ ಹೈಕೋರ್ಟ್​ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರದ ಪರ ನಗರ ಪೊಲೀಸರು ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಇದೇ ಏ.02ರಂದು ವಿಚಾರಣೆ ನಡೆಸಿದ್ದ ಕೋರ್ಟ್​ ಏ.22ಕ್ಕೆ ವಿಚಾರಣೆ ಮುಂದೂಡಿತ್ತು. ಇದೀಗ ಮತ್ತೊಮ್ಮೆ ಮುಂದೂಡಿದ್ದು, ವಿಚಾಣೆಯನ್ನು ಮೆ.14ಕ್ಕೆ ನಿಗದಿಪಡಿಸಿದೆ.

2024ರ ಜೂನ್​ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಈ ಹತ್ಯೆಯ ಕೇಸ್​ನಲ್ಲಿ ನಟ ದರ್ಶನ್​ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿತ್ತು. 6 ತಿಂಗಳ ಬಳಿಕ ಪ್ರಕರಣದ ಎಲ್ಲಾ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net