More

    ಮಾಣಿಕ್ಯಧಾರ ರಸ್ತೆ ದುರಸ್ತಿಗಳಿಸಿ

    ಚಿಕ್ಕಮಗಳೂರು: ಮಾಣಿಕ್ಯಧಾರಕ್ಕೆ ಸಾಗುವ ರಸ್ತೆ ತೀವ್ರ ಹದಗೆಟ್ಟಿದ್ದು, ಕೂಡಲೇ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಸಮಾಜ ಪರಿವರ್ತನ ಸಂಘದ ಮುಖಂಡರು ಮಂಗಳವಾರ ಡಿಸಿ ಮೀನಾ ನಾಗರಾಜ್‌ಗೆ ಮನವಿ ಸಲ್ಲಿಸಿದರು.
    ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿ, ಗಿರಿಪ್ರದೇಶದ ಮಾಣಿಕ್ಯಧಾರಕ್ಕೆ ಸಾಗುವ ರಸ್ತೆ ಬಹಳಷ್ಟು ಹದಗೆಟ್ಟದೆ. ಕೆಲ ದಿನದ ಹಿಂದೆ ಬಸ್‌ವೊಂದು ಉರುಳಿ ಓರ್ವ ಬಾಲಕ ಮೃತಪಟ್ಟಿದ್ದು. ಸುಮಾರು 25 ಮಂದಿ ಗಾಯಾಳುಗಳಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ರಸ್ತೆಯನ್ನು ಅಚ್ಚುಕಟ್ಟುಗೊಳಿಸಿದರೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
    ಶ್ರೀ ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್ ದರ್ಗಾದಿಂದ ಮಾಣಿಕ್ಯಧಾರಕ್ಕೆ ಕನಿಷ್ಟ 3 ಕಿ.ಮೀ.ಗಳ ಅಂತರವಿದೆ. ಈ ಪೈಕಿ ಒಂದು ಕಿ.ಮೀ.ಗೆ ಮಾತ್ರ ಕಾಂಕ್ರೀಟಿಕರಣ ಮಾಡಿಲ್ಲ. ಈ 1 ಕಿ.ಮೀ. ಅಂತರದಲ್ಲಿ ತೀವ್ರ ಗುಂಡಿಗಳಿದ್ದು ಬಸ್ ಅಪಘಾತಕ್ಕೆ ಈ ರಸ್ತೆಯೇ ಪ್ರಮುಖ ಕಾರಣ. ಉಳಿದ ಒಂದು ಕಿ.ಮೀ. ರಸ್ತೆ ಕಾಂಕ್ರೀಟೀಕರಣ ಮಾಡಲು ಕಾಣದ ಕೈಗಳು ತಡೆಯೊಡ್ಡಿವೆ. ಮಾಣಿಕ್ಯಧಾರಕ್ಕೆ ಹೋಗುವ ಪ್ರವಾಸಿಗರನ್ನು ಖಾಸಗಿ ಜೀಪ್‌ಗಳಲ್ಲೇ ಕರೆದುಕೊಂಡು ಹೋಗಿ ಹಣ ವಸೂಲಿ ಮಾಡುವ ದುರುದ್ದೇಶದಿಂದ ಕೂಡಿದೆ ಎಂದು ತಿಳಿಸಿದರು.
    ಸಂಘದ ಸಂಘಟನಾ ಕಾರ್ಯದರ್ಶಿ ಜಗದೀಶ್ ಕೋಟೆ ಮಾತನಾಡಿ, ಪ್ರವಾಸಿಗರನ್ನು ಭದ್ರತೆ ಇಲ್ಲದೆ ಕರೆದೊಯ್ಯುವ ಜೀಪ್‌ಗಳಿಗೆ ಕಡಿವಾಣ ಹಾಕಬೇಕು. ದರ್ಗಾದಿಂದ ಮಾಣಿಕ್ಯಧಾರದ ರಸ್ತೆ ಪಕ್ಕದಲ್ಲಿ ಪ್ರಪಾತಗಳಿದ್ದು ಕೂಡಲೇ ಸ್ಟೀಲ್ ರೋಡ್ ಬ್ಯಾರಿಯರ್‌ಗಳನ್ನು ಅಳವಡಿಸಬೇಕು ಎಂದರು.
    ಸರ್ಕಾರ ಪ್ರತಿ ವರ್ಷ ಪ್ರವಾಸೋದ್ಯಮ ಉತ್ತೇಜನಕ್ಕೆ ಮತ್ತು ರಸ್ತೆ ನಿರ್ವಹಣೆಗೆ ಕೋಟಿಗಟ್ಟಲೇ ಹಣ ಬಿಡುಗಡೆ ಮಾಡುತ್ತಿವೆ. ಇದರಿಂದ ರಸ್ತೆ ನಿರ್ವಹಣೆ ಮಾಡದೇ ಪ್ರವಾಸಿಗರಿಗೆ ತೊಂದರೆಗಳಾಗಿ ಅಪಘಾತಗಳು ಹೆಚ್ಚುತ್ತಿವೆ. ಇದರಿಂದ ಪ್ರವಾಸಿಗರು ಜಿಲ್ಲೆಯ ಪ್ರವಾಸೋದ್ಯಮ ವ್ಯವಸ್ಥೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಲಿದೆ. ಹಾಗಾಗಿ ಗಿರಿಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಹೇಳಿದರು.
    ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಂ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts