ದುರಸ್ತಿ ಕಂಡ ಸುಟ್ಟಟ್ಟಿ ಶುದ್ಧ ಕುಡಿಯುವ ನೀರಿನ ಘಟಕ

ಕೊಕಟನೂರ: ವಿಜಯವಾಣಿ ವರದಿಗೆ ಸ್ಪಂದಿಸಿ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಕಂಡಿದ್ದು, ಮತ್ತೆ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ.

ನಿರುಪಯುಕ್ತ ಶುದ್ಧ ಕುಡಿಯುವ ನೀರಿನ ಘಟಕದ ಕುರಿತು ಮೇ 6 ರಂದು (ಸೋಮವಾರ) ‘ಇದ್ದೂ ಇಲ್ಲದಂತಾದ ಶುದ್ಧ ಕುಡಿಯುವ ನೀರಿನ ಘಟಕ’ ಎಂಬ ಶಿರ್ಷೀಕೆಯಡಿಯಲ್ಲಿ ವಿಜಯವಾಣಿ ಪತ್ರಿಕೆ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿಸಿದ್ದಾರೆ.

ತೀವ್ರ ಬರ ಪರಿಸ್ಥಿತಿ ತಲೆದೋರಿ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರಿತಪಿಸುತ್ತಿದ್ದಾರೆ. ಕೃಷ್ಣಾ ನದಿ ಬತ್ತಿದ್ದರಿಂದ ಖಾಸಗಿ ಬೋರವೆಲ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮೀಣ ಜನರು ಶುದ್ಧ ಕುಡಿಯುವ ನೀರನ್ನು ಕುಡಿಯಲಿ ಎಂಬ ಉದ್ದೇಶದಿಂದ ಪ್ರತಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದಾರೆ. ಈ ಘಟಕಗಳತ್ತ ಗ್ರಾಪಂನವರು ಗಮನ ಹರಿಸಿ ಸರಿಯಾಗಿ ನೀರು ಪೂರೈಸಿ ಜನರಿಗೆ ಅನುಕೂಲ ಮಾಡಿಕೊಡಬೇಕು.

ನೀರಿನ ಸಮಸ್ಯೆ ಇರುವುದರಿಂದ ಸಾರ್ವಜನಿಕರೂ ನೀರನ್ನು ಮಿತವಾಗಿ ಬಳಸಬೇಕು ಎಂಬುದು ವಿಜಯವಾಣಿ ಆಶಯವಾಗಿದೆ.