More

    ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ರದ್ದುಪಡಿಸಿ

    ಶಿಕಾರಿಪುರ: ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024ನ್ನು ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಉಪತಹಸೀಲ್ದಾರ್‌ಗೆ ಗುರುವಾರ ಮನವಿ ಸಲ್ಲಿಸಲಾಯಿತು.
    ದೇವಸ್ಥಾನಗಳ ಮಹಾ ಸಂಘದ ಸದಸ್ಯ ಶಿವಯ್ಯಶಾಸಿ ಮಾತನಾಡಿ, ರಾಜ್ಯ ಸರ್ಕಾರ ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಿದೆ. ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳಿದ್ದು, ಅವುಗಳು ದೇವಸ್ಥಾನಗಳ ಪರಂಪರೆಯ ರಕ್ಷಣೆ ದೃಷ್ಟಿಯಿಂದ ಅತ್ಯಂತ ಅಪಾಯಕಾರಿ. ಹೀಗಾಗಿ ಇದನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
    ವೀರಶೈವ ಜಂಗಮ ಅರ್ಚಕ ಪುರೋಹಿತ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಆರಾಧ್ಯಮಠ, ಹಿಂದು ಜನಜಾಗೃತಿ ಸಮಿತಿಯ ಪರಶುರಾಮ, ಈರೇಶ್, ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಕುಮಾರಸ್ವಾಮಿ, ಶ್ರೀ ತುಳಜಾಭವಾನಿ ದೇವಸ್ಥಾನದ ಅಧ್ಯಕ್ಷ ಅರ್ಜುನ್ ರಾವ್, ತುಕ್ಕೊಜಿ ರಾವ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಸಮಿತಿಯ ರಘು, ಶ್ರೀನಿವಾಸ್, ಸತೀಶ್, ವಿಶ್ವನಾಥ್, ಪ್ರಕಾಶ್, ಹನುಮಂತಪ್ಪ, ಶರತ್ ಇತರರಿದ್ದರು,

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts