More

    ಪ್ರತಿನಿತ್ಯ 20 ಸಾವಿರ ಡೋಸ್ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ

    ಬೆಳಗಾವಿ: ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಕೇಂದ್ರ ಸ್ಥಾನವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ನಿತ್ಯ 20 ಸಾವಿರ ಜನರಿಗೆ ಕೋವಿಶೀಲ್ಡ್ ಲಸಿಕೆ ಹಾಕಲು ಸರ್ಕಾರ ಒಪ್ಪಿಗೆ ನೀಡಿದೆ. ಮತ್ತೊಂದೆಡೆ ಜಿಲ್ಲಾಡಳಿತ ಲಸಿಕೆಗಾಗಿ 210ಕ್ಕೂ ಅಧಿಕ ಹೆಚ್ಚುವರಿ ಕೇಂದ್ರಗಳನ್ನು ಆರಂಭಿಸುತ್ತಿದೆ.

    ಈಗಾಗಲೇ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 60 ವರ್ಷ ಮೇಲ್ಪಟ್ಟ 4,47,953 ಹಾಗೂ 45 ವರ್ಷ ಮೇಲ್ಪಟ್ಟ ಮತ್ತು 60 ವರ್ಷ ಒಳಗಿನ 7,68,878 ನಾಗರಿಕರಿಗೆ ಲಸಿಕೆ ಹಾಕುವ ಗುರಿ ಹಾಕಿಕೊಂಡಿದೆ. ಈಗಾಗಲೇ ಮೊದಲ ಹಂತದಲ್ಲಿ ಕರೊನಾ ವಾರಿಯರ್ಸ್ ಹೊರತುಪಡಿಸಿ 60 ವರ್ಷ ಮೇಲ್ಪಟ್ಟ 1.20 ಲಕ್ಷ ಜನರಿಗೆ ಲಸಿಕೆ ಹಾಕಿದೆ. ಅಲ್ಲದೆ 2 ಹಂತದಲ್ಲಿ 45 ವರ್ಷ ಮೇಲ್ಪಟ್ಟ 34 ಸಾವಿರ ನಾಗರಿಕೆ ಲಸಿಕೆ ಹಾಕಿದೆ. ಆದರೆ, ಸದ್ಯ ಲಸಿಕೆ ಅಲಭ್ಯತೆ ಕಾರಣ ಮತ್ತು ಜನರು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿರುವ ಹಿನ್ನೆಲೆಯಲ್ಲಿ ಲಸಿಕೆ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆ. ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ನಿತ್ಯ 25 ಸಾವಿರ ನಾಗರಿಕೆ ಲಸಿಕೆ ನೀಡುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದ 178 ಕೇಂದ್ರಗಳನ್ನು 618 ಹೊಸದಾಗಿ ಲಸಿಕಾ ಉಪ ಕೇಂದ್ರಗಳನ್ನು ಆರಂಭಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಸದ್ಯ 2.50 ಲಕ್ಷ ಡೋಸ್ ನೀಡುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ವಿನಂತಿಸಿದೆ. ಆದರೆ, ರಾಜ್ಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ಪೂರೈಕೆಯಾಗದಿರುವ ಹಿನ್ನೆಲೆಯಲ್ಲಿ ನಿತ್ಯ 20 ಸಾವಿರ ನಾಗರಿಕೆ ಲಸಿಕೆಯಂತೆ ಒಂದು ತಿಂಗಳ ಕಾಲ ಬೇಕಾಗುವಷ್ಟು ಲಸಿಕೆ ಪೂರೈಕೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಲಸಿಕಾ ಕೇಂದ್ರ ಸಜ್ಜುಗೊಳಿಸಲಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಳಗಾವಿ ಮಹಾನಗರ ಸೇರಿ ಪಟ್ಟಣ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ತಪಾಸಣೆ ಪ್ರಮಾಣ ಹೆಚ್ಚಿಸಲಾಗುತ್ತಿದ್ದು, ನಿತ್ಯ 1500 ರಿಂದ 2000 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಗ್ರಾಮೀಣ ಭಾಗಗಳಿಲ್ಲಿ ಸೋಂಕಿ ಲಕ್ಷಣಗಳು ಕಾಣಿಸುತ್ತಿಲ್ಲ.

    ಆದರೂ, ಜನರು ಹಳ್ಳಿಯಿಂದ ನಗರಕ್ಕೆ ಬಂದು ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

    ಈಗಾಗಲೇ ಬೆಂಗಳೂರಿಗೆ ಕೋವಿಶೀಲ್ಡ್ ಲಸಿಕೆ ಬಂದಿದ್ದು, ಇನ್ನೆರಡು ದಿನದಲ್ಲಿ ಬೆಳಗಾವಿ ಜಿಲ್ಲೆಗೆ ಲಸಿಕೆ ಬರಲಿದೆ. ಪ್ರತಿ ದಿನ 25 ಸಾವಿರ ಡೋಸ್ ನೀಡುವಂತೆ ಸರ್ಕಾರವನ್ನು ಕೇಳಲಾಗಿದೆ. 20 ಸಾವಿರ ಡೋಸ್ ನೀಡಲು ಒಪ್ಪಿಗೆ ನೀಡಿದೆ. ಇದಕ್ಕಾಗಿ ಹೆಚ್ಚುವರಿ ಲಸಿಕಾ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
    | ಡಾ.ಕೆ. ಹರೀಶಕುಮಾರ್ ಜಿಲ್ಲಾಧಿಕಾರಿ

    ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಪಟ್ಟಣ ಪ್ರದೇಶಗಳಲ್ಲಿ ಕರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲಾಗುತ್ತಿದ್ದು, ಲಸಿಕೆ ಲಭ್ಯತೆ ಕೊರತೆ ಹಿನ್ನೆಲೆಯಲ್ಲಿ ನಿತ್ಯ 3 ಸಾವಿರ ಜನರಿಗೆ ಮಾತ್ರ ಲಸಿಕೆ ಹಾಕುತ್ತಿದ್ದೇವೆ. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು.
    | ಡಾ.ಐ.ಪಿ.ಗಡಾದ ಜಿಲ್ಲಾ ಲಸಿಕಾ ಅಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts