More

    ಸಮಾನತೆ ತಂದುಕೊಟ್ಟಿರುವ ಸಂವಿಧಾನ

    ನಾಗಮಂಗಲ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ಗಣರಾಜ್ಯೋತ್ಸವ ಆಚರಿಸಲಾಯಿತು.

    ತಹಸೀಲ್ದಾರ್ ನಯೀಂ ಉನ್ನಿಸಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದಲ್ಲಿ ಪ್ರತಿಯೊಬ್ಬರೂ ಶಾಂತಿ ಮತ್ತು ಸಮಾನತೆಯಿಂದ ಬದುಕುತ್ತಿರುವುದಕ್ಕೆ ಅಂಬೇಡ್ಕರ್ ನೀಡಿರುವ ಸಂವಿಧಾನ ಕಾರಣವಾಗಿದೆ. ಪ್ರಪಂಚದಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನೀಡುವ ಜತೆಗೆ ಶಾಂತಿಯಿಂದ ಬದುಕುವ ಅವಕಾಶ ಮಾಡಿಕೊಟ್ಟಿರುವ ದೇಶ ನಮ್ಮ ಭಾರತ ಮಾತ್ರವಾಗಿದೆ ಎಂದರು.

    ಗಣರಾಜ್ಯೋತ್ಸವ ಹಾಗೂ ಸಂವಿಧಾನ ಕುರಿತು ನಾಗಮಂಗಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ನೀಲಾಮೂರ್ತಿ ಮಾತನಾಡಿದರು. ವೇದಿಕೆಯಲ್ಲಿ ಪಿಯುಸಿ ಹಾಗೂ ಎಸ್ಸೆಸ್ಸಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ತಾ.ಪಂ.ಇಒ ಚಂದ್ರಮೌಳಿ, ಡಿವೈಎಸ್ಪಿ ಲಕ್ಷ್ಮೀನಾರಾಯಣಪ್ರಸಾದ್, ಬಿಇಒ ಸುರೇಶ್, ಸಿಡಿಪಿಒ ಕೃಷ್ಣಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಬಸವೇಗೌಡ, ಸಿಪಿಐ ನಿರಂಜನ್, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್‌ಕುಮಾರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts