More

    ಚಾಮರಾಜಪೇಟೆ ಆಟದ ಮೈದಾನದಲ್ಲಿ ಮೊದಲ ಬಾರಿಗೆ ನಡೆದ ಗಣರಾಜ್ಯೋತ್ಸವ

    ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ ಮೊದಲ ಬಾರಿಗೆ 74ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿನ್ನೆಯಿಂದಲೇ ಮೈದಾನದ ಸುತ್ತಮುತ್ತ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್​ ಏರ್ಪಡಿಸಲಾಗಿತ್ತು.

    ಮೈದಾನದ ಸುತ್ತ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಮೈದಾನದ ಪೂರ್ವ ಭಾಗದಲ್ಲಿ ಧ್ವಜಾರೋಹಣಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ಇಂದು ಬೆಳಗ್ಗೆ 8ಕ್ಕೆ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಡಾ.ಶಿವಣ್ಣ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಮೈದಾನದ ಸುತ್ತ ನೆರೆದಿದ್ದ ಚಾಮರಾಜಪೇಟೆ ನಾಗರಿಕರು ‘ಸನಾತನ ಹಿಂದೂ ಧರ್ಮಕ್ಕೆ ಜೈ’, ‘ಭಾರತ ಮಾತೆಗೆ ಜೈ’ ಎಂದು ಘೋಷಣೆ ಕೂಗಿದರು. ಸ್ಥಳೀಯ ಶಾಸಕ ಜಮೀರ್ ಅಹ್ಮದ್, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.

    ಸಂತ ತೆರೆಸಾ ಬಾಲಕಿಯರ ಶಾಲೆ, ಚಾಮರಾಜಪೇಟೆ ಬಾಲಕಿಯರ ಶಾಲೆ, ಸರ್ಕಾರಿ ಕನ್ನಡ- ಆಂಗ್ಲ ಪ್ರಾಥಮಿಕ ಶಾಲೆ ಸೇರಿದಂತೆ ಐದು ಶಾಲೆಯ ಮಕ್ಕಳು ಭಾಗವಹಿಸಿದ್ದರು. ನೂರಾರು ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

    ದೆಹಲಿಯ ರಾಜಪಥ್​ನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪರೇಡ್​ನಲ್ಲಿ ಅನಾವರಣಗೊಳ್ಳಲಿದೆ ದೇಶದ ಮಿಲಿಟರಿ ಸಾಮರ್ಥ್ಯ

    ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts