Republic Day 2025; ಕರ್ತವ್ಯ ಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Draupadi Murmu
Published on

ನವದೆಹಲಿ: 76ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯ ಪಥದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಸೇನಾ ಹೆಲಿಕಾಪ್ಟರೆ ಮೂಲಕ ಪುಷ್ಪವೃಷ್ಠಿ ಮಾಡಲಾಯಿತು.

ಈ ಬಾರಿಯ ಗಣರಾಜ್ಯೋತ್ಸವಕ್ಕೆ (Republic Day) ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ನೂತನ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್​, ಕೇಂದ್ರ ಗೃಹ ಅಮಿತ್ ಷಾ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದಾರೆ.

76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರಯೋಧರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಪಥಸಂಚಲನವನ್ನು ವೀಕ್ಷಿಸಲು ಕರ್ತವ್ಯ ಪಥಕ್ಕೆ ಆಗಮಿಸಿದರು.

ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣಗೊಳ್ಳುತ್ತಿದೆ. ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, 10,000 ಗಣ್ಯರು ಪಾಲ್ಗೊಂಡಿದ್ದಾರೆ. 5,000 ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net