More

    ಉಚಿತ ವಿದ್ಯುತ್‌ಗೆ ಸಿಎಂಗೂ ಪತ್ರದ ಮೂಲಕ ಮನವಿ: ಸಚಿವ ಮಧು ಬಂಗಾರಪ್ಪ

    ಶಿವಮೊಗ್ಗ: ಅಡಕೆ ಸುಲಿಯುವ ಯಂತ್ರ ಬಳಕೆಗೆ ಗೃಹಬಳಕೆ ವಿದ್ಯುತ್ತನ್ನೇ ಬಳಸಲಾಗುತ್ತಿದ್ದು ಉಚಿತ ವಿದ್ಯುತ್ ಬಳಕೆ ಮಾಡಲು ಇಂಧನ ಕೆ.ಜೆ.ಜಾರ್ಜ್ ಜತೆಗೆ ಸಿಎಂ ಸಿದ್ದರಾಮಯ್ಯ ಅವರಿಗೂ ಪತ್ರದ ಮೂಲಕ ಮನವಿ ಮಾಡಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದರು.

    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರಲ್ಲಿ ಚುನಾವಣಾ ಪ್ರಚಾರಕ್ಕೆ ತೀರ್ಥಹಳ್ಳಿಗೆ ಬಂದಿದ್ದ ಅಮಿತ್ ಷಾ ಅವರು ಅಡಕೆ ಸಂಶೋಧನೆಗೆ 500 ಕೋಟಿ ರೂ. ಕೊಡುವುದಾಗಿ ಆಶ್ವಾಸನೆ ನೀಡಿದ್ದರು. ಇದುವರೆಗೂ ಒಂದು ನಯಾಪೈಸೆ ಕೊಟ್ಟಿಲ್ಲ. ಶಾಸಕ ಆರಗ ಜ್ಞಾನೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯನ್ನು ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ವಿರುದ್ಧ ಮಾಡಲಿ ಎಂದು ಟಾಂಗ್ ನೀಡಿದರು.
    ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರಸ್ತುತ 7 ತಾಸು ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ಲೋಡ್ ಶೆಡ್ಡಿಂಗ್ ಮಾಡುವುದಕ್ಕೆ ವಿದ್ಯುತ್ ಕೊರತೆಯೂ ಇಲ್ಲ ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
    ರಾಜ್ಯದಲ್ಲಿ ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಲ್ಲಿ 111 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ ಮಾಡಲಾಗುತ್ತದೆ. ಆದರೆ ಕಳೆದ ಅಕ್ಟೋಬರ್‌ನಲ್ಲಿ ಗ್ರಾಹಕರು 210 ಮಿಲಿಯನ್ ಯೂನಿಟ್ ವಿದ್ಯುತ್ ಬಳಸಿದ್ದಾರೆ. ಮಾಮೂಲಿಗಿಂತ ಎರಡು ಪಟ್ಟು ವಿದ್ಯುತ್ ಬಳಕೆಯಾಗಿದೆ. ಒಟ್ಟಾರೆ 18 ಲಕ್ಷ ಮಿಲಿಯನ್ ಯೂನಿಟ್ ಖರೀದಿಗೆ ಬೇಡಿಕೆ ಇತ್ತು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts